ನವದೆಹಲಿ : ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿಗೆ ಜಾಮೀನು ನೀಡಲಾಗಿದೆ. ಗೃಹಸಚಿವ ಅಮಿತ್ ಶಾ ವಿರುದ್ದದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ 2018 ರಲ್ಲಿ ಬಿಜೆಪಿ ಮುಖಂಡ ವಿಜಯ್ ಮಿಶ್ರಾ ರಾಹುಲ್ ಗಾಂಧಿ ವಿರುದ್ದ ದೂರು ದಾಖಲಿಸಿದ್ದರು. ಗೃಹಸಚಿವ ಅಮಿತ್ ಶಾ ವಿರುದ್ದ ಅವಹೇಳನಕಾರಿ ಪದಗಳನ್ನು ಬಳಸಿ ಭಾಷನ ಮಾಡುವ ಮೂಲಕ ತೇಜೋವಧೆ ಮಾಡಿದ್ದಾರೆಂದು ಆರೋಪಿಸಿ ಅವರ ವಿರುದ್ದ ಪ್ರಕರಣ ದಾಖಲಿಸಲಾಗಿತ್ತು.
ಉತ್ತರಪ್ರದೇಶದ ಸುಲ್ತಾನ್ ಪುರ ನ್ಯಾಯಾಲಯ ಈ ಕುರಿತು ಮಂಗಳವಾರ ವಿಚಾರಣೆ ನಡೆಸಿ, ಜಾಮೀನು ಮಂಜೂರು ಮಾಡಿದೆ. 2018 ರಲ್ಲಿ ರಾಹುಲ್ ಗಾಂಧಿ ಹೇಳಿಕೆ ಭಾರೀ ವಿವಾದವನ್ನೆಬ್ಬಿಸಿತ್ತು.