Select Your Language

Notifications

webdunia
webdunia
webdunia
webdunia

ಇಂದು ನೂತನ ಉಪರಾಷ್ಟ್ರಪತಿಯಾಗಿ ಸಿಪಿ ರಾಧಾಕೃಷ್ಣನ್ ಪ್ರಮಾಣ

CP Radhakrishnan

Krishnaveni K

ನವದೆಹಲಿ , ಶುಕ್ರವಾರ, 12 ಸೆಪ್ಟಂಬರ್ 2025 (09:16 IST)
ನವದೆಹಲಿ: ಇಂದು ಭಾರತದ ನೂತನ ಉಪರಾಷ್ಟ್ರಪತಿಯಾಗಿ ಸಿಪಿ ರಾಧಾಕೃಷ್ಣನ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈಗಾಗಲೇ ಅವರು ಮಹಾರಾಷ್ಟ್ರ ರಾಜ್ಯಪಾಲ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಇಂದು ಬೆಳಿಗ್ಗೆ 10 ಗಂಟೆಗೆ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ದೇಶದ 15 ನೇ ಉಪರಾಷ್ಟ್ರಪತಿಯಾಗಿ ಸಿಪಿ ರಾಧಾಕೃಷ್ಣನ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣ ವಚನ ಬೋಧಿಸಲಿದ್ದಾರೆ.

ಮೊನ್ನೆಯಷ್ಟೇ ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ ರೆಡ್ಡಿ ವಿರುದ್ಧ 152 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಜಗದೀಪ್ ಧನ್ಕರ್ ದಿಡೀರ್ ರಾಜೀನಾಮೆ ಬಳಿಕ ನೂತನ ಉಪರಾಷ್ಟ್ರಪತಿ ಹುದ್ದೆಗೆ ಚುನಾವಣೆ ನಡೆದಿತ್ತು.

ಇಂದಿನ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಪ್ರಧಾನಿ ಮೋದಿ, ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಅನೇಕ ಗಣ್ಯರಿಗೆ ಆಹ್ವಾನ ನೀಡಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

Karnataka Weather: ಕರಾವಳಿಯಲ್ಲ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ