ಬಾಲಕಿಯ ಬಾಯಲ್ಲಿ ಪಟಾಕಿ ಸಿಡಿಸಿದ ಭೂಪ; ಬಾಲಕಿ ಸ್ಥಿತಿ ಗಂಭೀರ

ಗುರುವಾರ, 8 ನವೆಂಬರ್ 2018 (14:00 IST)
ಲಕ್ನೋ : ಯುವಕನೊಬ್ಬ ಮೂರು ವರ್ಷದ ಬಾಲಕಿಯ ಬಾಯಲ್ಲಿ ಪಟಾಕಿ ಸಿಡಿಸಿದ ಘಟನೆ ಉತ್ತರ ಪ್ರದೇಶದ ಮೀರತ್‍ನಲ್ಲಿ ನಡೆದಿದೆ.


ಯುವಕ ಹರ್ಪಾಲ್ ಎಂಬಾತ ಮನೆ ಮುಂದೆ ಆಟವಾಡುತ್ತಿದ್ದ ಬಾಲಕಿಯನ್ನು ಕರೆದು ಆಕೆಯ ಬಾಯಲ್ಲಿ ಪಟಾಕಿಯನ್ನ ಇಟ್ಟು ಸಿಡಿಸಿ ಪರಾರಿಯಾಗಿದ್ದಾನೆ. ಇದರಿಂದ  ಬಾಲಕಿಯು ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಪೋಷಕರು ಆಕೆಯನ್ನ ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ.


ಪಟಾಕಿ ಬಾಯಲ್ಲಿ ಸಿಡಿದ ಪರಿಣಾಮ ಬಾಲಕಿಯ ಗಂಟಲಿಗೆ ಸೋಂಕಾಗಿದ್ದು, ಆಕೆಯ ಬಾಯಿಗೆ 50 ಕ್ಕೂ ಹೆಚ್ಚು ಹೊಲಿಗೆಗಳನ್ನ ಹಾಕಲಾಗಿದ್ದು, ಆಕೆಯ ಸದ್ಯದ ಪರಿಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.


ಬಾಲಕಿಯ ಪೋಷಕರು ಹರ್ಪಾಲ್ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ಈ ಬಗ್ಗೆ ಎಫ್‍ಐಆರ್ ದಾಖಲಿಸಿಕೊಂಡ ಪೊಲೀಸರು ಆರೋಪಿಯ ಹುಡುಕಾಟ ನಡೆಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಜನಾರ್ಧನ ರೆಡ್ಡಿ ಪ್ರಕರಣದಲ್ಲಿ ಹಸ್ತಕ್ಷೇಪ ಮಾಡಲ್ಲ: ಸಚಿವ ಡಿಕೆಶಿ ಸ್ಪಷ್ಟನೆ