Webdunia - Bharat's app for daily news and videos

Install App

ಪಟಾಕಿ ತಯಾರಿಕೆ ಕೇಂದ್ರದಲ್ಲಿ ಬೆಂಕಿ: 15 ಮಂದಿ ದುರ್ಮರಣ

Webdunia
ಸೋಮವಾರ, 20 ಅಕ್ಟೋಬರ್ 2014 (16:15 IST)
ಕಾಕಿನಾಡಾ: ಪಟಾಕಿ ಫ್ಯಾಕ್ಟರಿಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 15 ಉದ್ಯೋಗಿಗಳು ಸಾವನ್ನಪ್ಪಿದ್ದು 11 ಕ್ಕೂ ಹೆಚ್ಚು ಮಂದಿ ಗಾಯಗೊಂಡ ದಾರುಣ ಘಟನೆ ವರದಿಯಾಗಿದೆ.
 
ಆಂಧ್ರಪ್ರದೇಶದ ಪೂರ್ವಗೋದಾವರಿ ಜಿಲ್ಲೆಯ ಕಾಕಿನಾಡ ನಗರದಲ್ಲಿರುವ ಪಟಾಕಿ ತಯಾರಿಕೆ ಕೇಂದ್ರದಲ್ಲಿ ದುರಂತ ಸಂಭವಿಸಿದ್ದರಿಂದ ಸ್ಥಳಕ್ಕೆ ಅಗ್ನಿಶಾಮಕ ದಳ ಧಾವಿಸಿದ್ದು, ಘಟನೆಯಲ್ಲಿ ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
 
ಪಟಾಕಿ ತಯಾರಿಕೆ ಕೇಂದ್ರದಲ್ಲಿ ಇಂದು ಬೆಳಿಗ್ಗೆ 30 ಮಂದಿ ಉದ್ಯೋಗಿಗಳು ಕಾರ್ಯನಿರ್ವಹಿಸುತ್ತಿದ್ದು ಸಾವಿನ ಸಂಖ್ಯೆಯಲ್ಲಿ ಮತ್ತಷ್ಟು ಹೆಚ್ಚಳವಾಗಬಹುದು ಎಂದು ಪೊಲೀಸ್ ಅಧಿಕಾರಿಗಳು ಶಂಕಿಸಿದ್ದಾರೆ.
 
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರಲ್ಲಿ ಬಹುತೇಕರ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments