ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಎದ್ದಿರುವ ವಾರ್ಧಾ ಚಂಡಮಾರುತದ ಪರಿಣಾಮ ಬೆಂಗಳೂರು ನಗರಕ್ಕೂ ತಟ್ಟಲಿದೆ ಎಂದು ಹೇಳಲಾಗುತ್ತಿದೆ. ಇಂದು ಮಧ್ಯಾಹ್ನದ ಬಳಿಕ ರಾಜಧಾನಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಮೋಡಗಳ ಸಾಂದ್ರತೆಯ ಪರಿಣಾಮ ಬೆಂಗಳೂರು ಉತ್ತರ ಭಾಗದಲ್ಲಿ ಹೆಚ್ಚು ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ನಿರ್ದೇಶಕ ಸುಂದರ್ ಮೇತ್ರಿ ಮಾಹಿತಿ ನೀಡಿದ್ದಾರೆ.
ಬೆಂಗಳೂರಲ್ಲದೇ ಚಿತ್ರದುರ್ಗ ಮತ್ತು ಬಳ್ಳಾರಿ ಜಿಲ್ಲೆಯ ಕೆಲ ಭಾಗಗಳಲ್ಲೂ ಮಳೆಯಾಗುವ ಸಂಭವವಿದೆ.
ಅಂಡಮಾನ್ ನಿಕೋಬಾರ್ ದ್ವೀಪ ಸಮೂಹದಲ್ಲಿ ಭಾರಿ ಮಳೆಗೆ ಕಾರಣವಾಗಿದ್ದ ವಾರ್ಧಾ ಚಂಡಮಾರುತವೀಗ ಪೂರ್ವ ಕರಾವಳಿಯಲ್ಲಿ ಆತಂಕಕ್ಕೆ ಕಾರಣವಾಗಿದೆ. ಮುಂಜಾನೆ 9.30ರ ಸುಮಾರಿಗೆ ವಾರ್ಧಾ 120 ಕೀಲೋಮೀಟರ್ ವೇಗದಲ್ಲಿ ಅಬ್ಬರಿಸುತ್ತ ಚೆನ್ನೈ ತಲುಪಿದ್ದು ನಗರದಾದ್ಯಂತ ಗಾಳಿ ಮಳೆಯಾಗುತ್ತಿದೆ.
ಮಳೆಯಾಗುತ್ತಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಖಾಸಗಿ ಕಂಪನಿಗಳಿಗೂ ಸಹ ರಜೆ ಘೋಷಿಸಲಾಗಿದ್ದು, ಕೆಲವು ಕಂಪನಿಗಳು ಮನೆಯಿಂದಲೇ ಕೆಲಸ ಮಾಡುವಂತೆ ಉದ್ಯೋಗಿಗಳಿಗೆ ಸೂಚನೆ ನೀಡಿವೆ.
ತಮಿಳುನಾಡಿನ ಉತ್ತರ ಭಾಗ ಮತ್ತು ದಕ್ಷಿಣ ಆಂಧ್ರದಲ್ಲಿ ವಾರ್ಧಾ ಅಪ್ಪಳಿಸುತ್ತಿದ್ದು ಮಧ್ಯಾಹ್ನದ ನಂತರ ನೆಲ್ಲೂರು ಮತ್ತು ಮಚಲೀಪಟ್ಟಣಂ ಹಾದು ಹೋಗಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.