Webdunia - Bharat's app for daily news and videos

Install App

ಪೊಲೀಸ್ ಆಫೀಸರ್‌ ಆಗ್ಬೇಕು ಎನ್ನುವ ಕನಸು ಹೊತ್ತ ದಲಿತ ಯುವತಿಯ ಮೇಲೆ ಗ್ಯಾಂಗ್‌ರೇಪ್

Webdunia
ಭಾನುವಾರ, 28 ಫೆಬ್ರವರಿ 2016 (15:28 IST)
ಪೊಲೀಸ್ ಅಧಿಕಾರಿಯಾಗಿ ಜನಸೇವೆ ಸಲ್ಲಿಸಬೇಕು ಎನ್ನುವ ಕನಸು ಹೊಂದಿದ್ದ 22 ವರ್ಷ ಯುವತಿಯ ಮೇಲೆ ಇಬ್ಬರು ಯುವಕರು ಅತ್ಯಾಚಾರವೆಸಗುತ್ತಿದ್ದರೆ, ಮತ್ತೊಬ್ಬ ಆರೋಪಿ ಅತ್ಯಾಚಾರವೆಸಗುತ್ತಿರುವ ದೃಶ್ಯಗಳ ವಿಡಿಯೋ ಮೊಬೈಲ್‌ನಲ್ಲಿ ಚಿತ್ರಿಕರಿಸಿಕೊಂಡ ಹೇಯ ಘಟನೆ ತೆಲಂಗಾಣಾದ ಕರೀಮ್ ನಗರ್ ಜಿಲ್ಲೆಯಲ್ಲಿ ವರದಿಯಾಗಿದೆ.
 
ಆರೋಪಿಗಳಾದ ಜಿ.ಶ್ರೀನಿವಾಸ್ ಮತ್ತು ಎಂ, ಅಂಜಯ್ಯ ಯುವತಿಯ ಸಹಪಾಠಿಗಳಾಗಿದ್ದು ಪೊಲೀಸ್ ಪಡೆಯನ್ನು ಸೇರಲು ನೀಡುತ್ತಿರುವ ಕೋಚಿಂಗ್ ಕ್ಲಾಸ್‌ನಲ್ಲಿ ತರಬೇತಿ ಪಡೆಯುತ್ತಿದ್ದರು ಎನ್ನಲಾಗಿದೆ. 
 
ಯುವತಿಯ ಮೇಲೆ ಅತ್ಯಾಚಾರವೆಸಗಿ, ಅತ್ಯಾಚಾರವೆಸಗುತ್ತಿರುವ ದೃಶ್ಯಗಳ ವಿಡಿಯೋ ಮಾಡಿಕೊಂಡು ಯುವತಿಗೆ ಸೆಕ್ಸ್ ಸುಖ ನೀಡದಿದ್ದಲ್ಲಿ ಮೊಬೈಲ್‌ನಲ್ಲಿರುವ ವಿಡಿಯೋವನ್ನು ಇಂಟರ್‌ನೆಟ್‌ನಲ್ಲಿ ಹಾಕುವುದಾಗಿ ಬೆದರಿಕೆಯೊಡ್ಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. 
 
ಕಳೆದ ಫೆಬ್ರವರಿ 10 ರಂದು ಅತ್ಯಾಚಾರಕ್ಕೊಳಗಾದ ಯುವತಿ ಹಾಗೂ ಆಕೆಯ ಗೆಳತಿ ಮತ್ತು ಮೂವರು ಸಹಪಾಠಿಗಳು ಸಿನೆಮಾ ನೋಡಿಕೊಂಡು ವೀಣಾವಂಕಾ ಗ್ರಾಮಕ್ಕೆ ಮರಳುತ್ತಿರುವ ಸಂದರ್ಭದಲ್ಲಿ ಘಟನೆ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 
 
ಮೂವರು ಆರೋಪಿಗಳು ಇಬ್ಬರು ಯುವತಿಯರನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗುತ್ತಿರುವಾಗ ಅಪಾಯದ ಸೂಚನೆ ಅರಿತ ಮತ್ತೊಬ್ಬ ಯುವತಿ ಓಡಿಹೋಗುವಲ್ಲಿ ಯಶಸ್ವಿಯಾಗಿದ್ದಾಳೆ. ಇಬ್ಬರು ಯವಕರು ಆಕೆಯ ಮೇಲೆ ಅತ್ಯಾಚಾರವೆಸಗುತ್ತಿದ್ದರೆ ಮತ್ತೊಬ್ಬ ಯುವಕ ಅತ್ಯಾಚಾರದ ದೃಶ್ಯವನ್ನು ಮೊಬೈಲ್‌ನಲ್ಲಿ ವಿಡಿಯೋ ಮಾಡಿಕೊಂಡಿದ್ದಾನೆ.
 
ಎರಡು ದಿನಗಳ ಹಿಂದಷ್ಟೆ ಯುವತಿ ತನ್ನ ಪೋಷಕರಿಗೆ ನಡೆದ ಘಟನೆಯ ಬಗ್ಗೆ ಮಾಹಿತಿ ನೀಡಿದ ನಂತರ, ಯುವತಿಯ ಸಂಬಂಧಿಕರು ಮೂವರು ಆರೋಪಿ ಯುವಕರನ್ನು ಮನಬಂದಂತೆ ಥಳಿಸಿದ್ದಾರೆ, ಗಂಭೀರವಾಗಿ ಗಾಯಗೊಂಡ ಆರೋಪಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 
 
ಆರೋಪಿಗಳ ವಿರುದ್ಧ ಎಸ್‌.ಸಿ.ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಮತ್ತು ಅತ್ಯಾಚಾರದ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದರಿಂದ ಆರೋಪಿಗಳನ್ನು ಬಂಧಿಸಲಾಗಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments