Publish Date: Wed, 20 Mar 2024 (19:58 IST)
Updated Date: Wed, 20 Mar 2024 (20:05 IST)
ನವದೆಹಲಿ: ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇರೆಗೆ ಬಹುಜನ ಸಮಾಜ ಪಕ್ಷದಿಂದ ಅಮಾನತುಗೊಂಡಿದ್ದ ಸಂಸದ ಡ್ಯಾನಿಶ್ ಅಲಿ ಅವರು ಇಂದು ಅಧಿಕೃತವಾಗಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು.
ಮಾರ್ಚ್ 14ರಂದು ಡ್ಯಾನಿಶ್ ಅಲಿ ಅವರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಈ ಮೂಲಕ ಕಾಂಗ್ರೆಸ್‌ಗೆ ಸೇರ್ಪಡೆಯಾಗುವ ಮೂನ್ಸೂಚನೆಯನ್ನು ನೀಡಿದ್ದರು.
ಡ್ಯಾನಿಶ್ ಅಲಿ ಅವರು ಉತ್ತರ ಪ್ರದೇಶದ ಅಮ್ರೋಹಾ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಇವರು ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ 2023ರ ಡಿಸೆಂಬರ್ 9ರಂದು ಸಂಸದ ಡ್ಯಾನಿಶ್ ಅಲಿ ಅವರನ್ನು ಬಹುಜನ ಸಮಾಜ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಲಾಗಿತ್ತು.