Daily Horoscope
✕

ಸಾವನ್ನಪ್ಪಿದ ಮಗು ಸ್ಮಶಾನದಲ್ಲಿ ಜೀವಂತ!

Webdunia
ಮಂಗಳವಾರ, 24 ಮೇ 2022 (09:38 IST)
ಶ್ರೀನಗರ : ನವಜಾತ ಶಿಶು ಸಾವನ್ನಪ್ಪಿದೆ ಎಂದು ವೈದ್ಯರು ಅವರು ಘೋಷಿಸಿದ್ದರಿಂದ ಆ ಮಗುವನ್ನು ಕುಟುಂಬಸ್ಥರು ಅಂತ್ಯಸಂಸ್ಕಾರ ಮಾಡಲು ಸ್ಮಶಾನಕ್ಕೆ ಕರೆದೊಯ್ಯುತ್ತಿರುವಾಗ ಮಗು ಜೀವಂತವಾಗಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯ ಬನಿಹಾಲ್ ಉಪ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ.
 
ಬಂಕೂಟ್ ನಿವಾಸಿ ಬಶರತ್ ಅಹ್ಮದ್ ಅವರ ಪತ್ನಿಯ ಹೆರಿಗೆ ಉಪ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿತ್ತು. ಇದಾದ ನಂತರ ಅಲ್ಲಿದ್ದ ಆಸ್ಪತ್ರೆಯ ಸಿಬ್ಬಂದಿ ಮಗು ಸತ್ತಿದೆ ಎಂದು ಕುಟುಂಬಕ್ಕೆ ತಿಳಿಸಿದ್ದರು. ಇದಾದ ಬಳಿಕ ಕುಟುಂಬಸ್ಥರು ಮಗುವನ್ನು ಅಂತ್ಯಸಂಸ್ಕಾರಕ್ಕೆ ಕೊಂಡೊಯ್ದಿದ್ದಾರೆ.

ಆದರೆ ಕುಟುಂಬದ ಸದಸ್ಯರು ಮಗು ಚಲಿಸುತ್ತಿರುವುದನ್ನು ಗಮನಿಸಿ ಇತರರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಮಗುವನ್ನು ಮತ್ತೆ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಲ್ಲಿಂದ ವಿಶೇಷ ಚಿಕಿತ್ಸೆಗಾಗಿ ಶ್ರೀನಗರದ ಆಸ್ಪತ್ರೆಗೆ ರವಾನಿಸಲಾಯಿತು. 

ವೈದ್ಯರ ನಿರ್ಲಕ್ಷ್ಯದ ವಿರುದ್ಧ ಕೊಪಗೊಂಡ ಮಗುವಿನ ಕುಟುಂಬ ಸದಸ್ಯರು ಆಸ್ಪತ್ರೆಯ ಹೊರಗೆ ಪ್ರತಿಭಟನೆ ನಡೆಸಿದರು. ಘಟನೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಇಬ್ಬರು ಆಸ್ಪತ್ರೆಯ ನೌಕರರನ್ನು ಅಮಾನತುಗೊಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಿಯೋ ಪ್ಲಾಟ್‌ಫಾರ್ಮ್ಸ್ ಐಪಿಒ ದಿನಾಂಕ ಮತ್ತು ಬೆಲೆ ಪ್ರಕಟ: ಷೇರು ಬೆಲೆ ನಿಗದಿ

ರಸ್ತೆ ಬದಿ ಸ್ಕೂಟಿಯಲ್ಲಿ ಕೂತಿದ್ದ ಅಪ್ರಾಪ್ತೆಯ ತಬ್ಬಿ ಇದೆಂಥಾ ಅಸಭ್ಯ ವರ್ತನೆ: ಶಾಕಿಂಗ್ Video

ಕರ್ನಾಟಕದ ನೂತನ ರಾಜ್ಯಪಾಲೆಯಾಗಿ ಡಾ. ಸುಧಾ ಯಾದವ್ ಪ್ರಮಾಣವಚನ

ಆಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೊಠಡಿಯಲ್ಲೇ ಮದ್ಯದ ಪಾರ್ಟಿ: Viral video

ದೆಹಲಿಯಲ್ಲಿ ಇಂದು ಸಿಜೆಪಿ ತಿರಂಗಾ ಮಾರ್ಚ್: ಕಾನಾಟ್ ಪ್ಲೇಸ್ ಸೆಂಟ್ರಲ್ ಪಾರ್ಕ್ ಬಂದ್, ಬಿಗಿ ಪೊಲೀಸ್ ಭದ್ರತೆ

ಮುಂದಿನ ಸುದ್ದಿ
Show comments