Publish Date: Mon, 27 Nov 2017 (10:19 IST)
Updated Date: Mon, 27 Nov 2017 (10:22 IST)
ಹನ್ನೆರಡು ವರ್ಷದೊಳಗಿನ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದರೆ ಮರಣ ದಂಡನ ವಿಧಿಸಲು ಕಾನೂನಿಗೆ ತಿದ್ದುಪಡಿ ತರಲು ಮಧ್ಯಪ್ರದೇಶ ಸರ್ಕಾರ ಸಚಿವ ಸಂಪುಟದಲ್ಲಿ ಒಪ್ಪಿಗೆ ಪಡೆದುಕೊಂಡಿದೆ.
ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸುವವರಿಗೂ ಕಠಿಣ ಶಿಕ್ಷೆ ವಿಧಿಸುವ ಪ್ರಸ್ತಾಪಕ್ಕೂ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಗರಿಷ್ಠ 1 ಲಕ್ಷ ರೂಪಾಯಿ ದಂಡ ವಿಧಿಸಲು ಅವಕಾಶ ನೀಡಲಾಗಿದೆ.
ಚಳಿಗಾಲದ ಅಧಿವೇಶನದಲ್ಲಿ ತಿದ್ದುಪಡಿ ಮಸೂದೆಯನ್ನು ಮಂಡಿಸಿ ಅಂಗೀಕಾರದ ಪಡೆದುಕೊಂಡು ರಾಷ್ಟ್ರಪತಿ ಅಂಕಿತಕ್ಕೆ ಕಳುಹಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಜಯಂತ್ ಅವರು ಹೇಳಿದ್ದಾರೆ.