ಮುಂಬೈ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಿಗೆ ಗುರುವಾರ ಜೀವ ಬೆದರಿಕೆ ಬಂದಿದೆ. ಮುಂಬೈ ಪೊಲೀಸರ ಪ್ರಕಾರ, ಅಪರಿಚಿತ ವ್ಯಕ್ತಿಯೊಬ್ಬರು ಗೋರೆಗಾಂವ್ ಪೊಲೀಸ್ ಠಾಣೆಗೆ ಬೆದರಿಕೆಯೊಂದಿಗೆ ಇಮೇಲ್ ಕಳುಹಿಸಿದ್ದಾರೆ.
ಅಪರಿಚಿತ ವ್ಯಕ್ತಿಗಳು ಶಿಂಧೆ ಅವರ ಕಾರಿನಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಮಂತ್ರಾಲಯ ಮತ್ತು ಜೆಜೆ ಮಾರ್ಗ್ ಪೊಲೀಸ್ ಠಾಣೆಗೂ ಇದೇ ರೀತಿಯ ಬೆದರಿಕೆ ಇಮೇಲ್‌ಗಳು ಬಂದಿವೆ. ಪೊಲೀಸರು ತನಿಖೆ ನಡೆಸುತ್ತಿದ್ದು, ಬೆದರಿಕೆ ಮೇಲ್ ಕಳುಹಿಸಿದವರಿಗಾಗಿ ಶೋಧ ನಡೆಸುತ್ತಿದ್ದಾರೆ.
ಪೊಲೀಸರು ಪ್ರಸ್ತುತ ಇಮೇಲ್‌ನ ಮೂಲವನ್ನು ತನಿಖೆ ಮಾಡುತ್ತಿದ್ದಾರೆ. ಪ್ರಾಥಮಿಕ ತನಿಖೆಯು ಇದು ಹುಸಿ ಇಮೇಲ್ ಎಂದು ಸೂಚಿಸಿದೆ.