ನೇಪಾಳ ಹಿಂಸಾಚಾರದಲ್ಲಿ ಮೃತರ ಸಂಖ್ಯೆ ಏರುತ್ತಲೇ ಇದೆ, ಒಬ್ಬ ಭಾರತೀಯನೂ ಸಾವು

Sampriya
ಶುಕ್ರವಾರ, 12 ಸೆಪ್ಟಂಬರ್ 2025 (17:14 IST)
Photo Credit X
ಕಠ್ಮಂಡು: ನೇಪಾಳದಲ್ಲಿ ನಡೆಯುತ್ತಿರುವ ಜನರಲ್ ಝಡ್ ಪ್ರತಿಭಟನೆ ಹಿಂಸಚಾರಕ್ಕೆ ತಿರುಗಿದ ಪರಿಣಾಮ ಇದೀಗ ಮೃತರ ಸಂಖ್ಯೆ 51ಕ್ಕೆ ಏರಿಕೆಯಾಗಿದೆ. ಈ ಸಂಬಂಧ ದೇಶದ ಆರೋಗ್ಯ ಮತ್ತು ಜನಸಂಖ್ಯಾ ಸಚಿವಾಲಯ ಶುಕ್ರವಾರ ಬಿಡುಗಡೆ ವರದಿಯನ್ನು ಬಿಡುಗಡೆ ಮಾಡಿದೆ. 

ಈ ಪೈಕಿ 30 ವ್ಯಕ್ತಿಗಳು ಗುಂಡೇಟಿನಿಂದ ಸಾವನ್ನಪ್ಪಿದ್ದರೆ, 21 ಜನರು ಸುಟ್ಟಗಾಯಗಳಿಗೆ ಬಲಿಯಾಗಿದ್ದಾರೆ. ಪೋಸ್ಟ್, ನೇಪಾಳ ಪೋಲೀಸ್ ಸಹ ವಕ್ತಾರ  ರಮೇಶ್ ಥಾಪಾ ಅವರು ಪ್ರತಿಕ್ರಿಯಿಸಿ, ಸಾವನ್ನಪ್ಪಿದವರಲ್ಲಿ ಒಬ್ಬ ಭಾರತೀಯ ಮತ್ತು ಮೂವರು ಪೊಲೀಸ್ ಸಿಬ್ಬಂದಿ ಸೇರಿದ್ದಾರೆ ಎಂದು ಹೇಳಿದರು. 

ಒಟ್ಟು ಮೃತರ ಪೈಕಿ 36 ಶವಗಳನ್ನು ಮಹಾರಾಜ್‌ಗಂಜ್‌ನ ತ್ರಿಭುವನ್ ವಿಶ್ವವಿದ್ಯಾಲಯದ ಬೋಧನಾ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಅಲ್ಲಿ ಮರಣೋತ್ತರ ಪರೀಕ್ಷೆ ಶುಕ್ರವಾರ ಪ್ರಾರಂಭವಾಯಿತು. 

ಮಹಾರಾಜ್‌ಗಂಜ್‌ನಲ್ಲಿರುವ ತ್ರಿಭುವನ್ ವಿಶ್ವವಿದ್ಯಾಲಯದ ಬೋಧನಾ ಆಸ್ಪತ್ರೆಯು ಮರಣೋತ್ತರ ಪರೀಕ್ಷೆಯ ನಂತರ ಜೆನ್ ಝಡ್ ಪ್ರತಿಭಟನಾಕಾರರ ಮೃತ ದೇಹಗಳನ್ನು ಬಿಡುಗಡೆ ಮಾಡಲು ಪ್ರಾರಂಭಿಸಿದೆ. 

ಸೆಪ್ಟಂಬರ್ 8, 2025 ರಂದು ಕಠ್ಮಂಡು ಮತ್ತು ಪೋಖರಾ, ಬಟ್ವಾಲ್ ಮತ್ತು ಬಿರ್‌ಗುಂಜ್ ಸೇರಿದಂತೆ ಇತರ ಪ್ರಮುಖ ನಗರಗಳಲ್ಲಿ ಪ್ರತಿಭಟನೆಗಳು ಪ್ರಾರಂಭವಾದವು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿ ಗುದ್ದಾಟಕ್ಕೆ ಬ್ರೇಕ್ ಬೆನ್ನಲ್ಲೇ ಡಿಕೆ ಸಂಪುಟದಲ್ಲಿ ಮಂತ್ರಿಯಾಗಲ್ಲ ಎಂದ ರಾಜಣ್ಣ

ನಮ್ಮ ಪಕ್ಷಕ್ಕೆ ದುಡ್ಡು ಕೊಡದೇ ಇನ್ಯಾರಿಗೆ ಕೊಡೋಣ: ಡಿ.ಕೆ. ಶಿವಕುಮಾರ್ ಪ್ರಶ್ನೆ

ವಾಚ್ ಬಗ್ಗೆ ಪ್ರಶ್ನಿಸುವವರು ಐಟಿ ಇಲಾಖೆಯಿಂದ ಏಕೆ ತನಿಖೆ ನಡೆಸಬಾರದು

ಪರಪ್ಪನ ಅಗ್ರಹಾರ ಕೈದಿಗಳ ಚಟ ತೀರಿಸಲು ಹೋಗಿ ಅರೆಸ್ಟ್ ಆದ ವಾರ್ಡನ್

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments