Publish Date: Sun, 28 Nov 2021 (09:56 IST)
Updated Date: Sun, 28 Nov 2021 (09:59 IST)
ಪಶ್ಚಿಮ ಬಂಗಾಳದ ನಾದಿಯಾ ಜಿಲ್ಲೆಯಲ್ಲಿ ಶನಿವಾರ ಮಧ್ಯರಾತ್ರಿ ಭೀಕರ ಅಪಘಾತ ನಡೆದಿದೆ.
ಈ ದುರಂತದಲ್ಲಿ 18 ಮಂದಿ ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತದೇಹವನ್ನು ಹೊತ್ತೊಯ್ಯುವ ವಾಹನದಲ್ಲಿ ಸುಮಾರು 20 ಜನರು ಉತ್ತರ 24 ಪರಗಣದ ಬಾಗ್ಡಾದಿಂದ ನವದ್ವೀಪದ ಸ್ಮಶಾನದ ಕಡೆಗೆ ತೆರಳುತ್ತಿದ್ದಾಗ ದುರ್ಘಟನೆ ನಡೆದಿದೆ.
ಈ ಮೃತದೇಹವನ್ನು ಹೊತ್ತ ವಾಹನವು ರಸ್ತೆ ಬದಿಯಲ್ಲಿದ್ದ ಟ್ರಕ್ವೊಂದಕ್ಕೆ ಡಿಕ್ಕಿ ಹೊಡೆದಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಘಟನೆ ನಡೆದಿದ್ದು ಹಂಸಖಲಿ ಪೊಲೀಸ್ ಠಾಣೆ ವ್ಯಾಪ್ತಿಯ ಫುಲ್ಬರಿ ಎಂಬಲ್ಲಿ.
ವಿಪರೀತ ಇಬ್ಬನಿ ಬೀಳುತ್ತಿದ್ದ ಕಾರಣ ಚಾಲಕನಿಗೆ ರಸ್ತೆ ಸರಿಯಾಗಿ ಕಾಣಲಿಲ್ಲ. ಹಾಗೇ ಆತ ತುಂಬ ವೇಗವಾಗಿ ವಾಹನ ಚಾಲನೆ ಮಾಡುತ್ತಿದ್ದ. ಇದರಿಂದಾಗಿ ರಸ್ತೆ ಪಕ್ಕದಲ್ಲಿ ನಿಂತ ಟ್ರಕ್ಗೆ ಹೋಗಿ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಹಾಗೇ, ಹೆಚ್ಚಿನ ತನಿಖೆಯನ್ನೂ ಕೈಗೆತ್ತಿಕೊಂಡಿದ್ದಾರೆ.