Daily Horoscope
✕

ಭೀಕರ ಅಪಘಾತ 18 ಮಂದಿ ಸಾವು!

Webdunia
ಭಾನುವಾರ, 28 ನವೆಂಬರ್ 2021 (09:56 IST)
ಪಶ್ಚಿಮ ಬಂಗಾಳದ ನಾದಿಯಾ ಜಿಲ್ಲೆಯಲ್ಲಿ ಶನಿವಾರ ಮಧ್ಯರಾತ್ರಿ ಭೀಕರ ಅಪಘಾತ ನಡೆದಿದೆ.
ಈ ದುರಂತದಲ್ಲಿ 18 ಮಂದಿ ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.  ಮೃತದೇಹವನ್ನು ಹೊತ್ತೊಯ್ಯುವ ವಾಹನದಲ್ಲಿ ಸುಮಾರು 20 ಜನರು ಉತ್ತರ 24 ಪರಗಣದ ಬಾಗ್ಡಾದಿಂದ ನವದ್ವೀಪದ ಸ್ಮಶಾನದ ಕಡೆಗೆ ತೆರಳುತ್ತಿದ್ದಾಗ ದುರ್ಘಟನೆ ನಡೆದಿದೆ.
ಈ ಮೃತದೇಹವನ್ನು ಹೊತ್ತ ವಾಹನವು ರಸ್ತೆ ಬದಿಯಲ್ಲಿದ್ದ ಟ್ರಕ್ವೊಂದಕ್ಕೆ ಡಿಕ್ಕಿ ಹೊಡೆದಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಘಟನೆ ನಡೆದಿದ್ದು ಹಂಸಖಲಿ ಪೊಲೀಸ್ ಠಾಣೆ ವ್ಯಾಪ್ತಿಯ ಫುಲ್ಬರಿ ಎಂಬಲ್ಲಿ.
ವಿಪರೀತ ಇಬ್ಬನಿ ಬೀಳುತ್ತಿದ್ದ ಕಾರಣ ಚಾಲಕನಿಗೆ ರಸ್ತೆ ಸರಿಯಾಗಿ ಕಾಣಲಿಲ್ಲ. ಹಾಗೇ ಆತ ತುಂಬ ವೇಗವಾಗಿ ವಾಹನ ಚಾಲನೆ ಮಾಡುತ್ತಿದ್ದ. ಇದರಿಂದಾಗಿ ರಸ್ತೆ ಪಕ್ಕದಲ್ಲಿ ನಿಂತ ಟ್ರಕ್ಗೆ ಹೋಗಿ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಹಾಗೇ, ಹೆಚ್ಚಿನ ತನಿಖೆಯನ್ನೂ ಕೈಗೆತ್ತಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments