Select Your Language

Notifications

webdunia
webdunia
webdunia
webdunia

`ಸುಪ್ರೀಂಕೋರ್ಟ್ ಅವಕಾಶ ನೀಡಿದರೂ ಸಭ್ಯಸ್ಥ ಮಹಿಳೆಯರು ದೇಗುಲ ಪ್ರವೇಶಿಸುವುದಿಲ್ಲ’

webdunia
ಶನಿವಾರ, 14 ಅಕ್ಟೋಬರ್ 2017 (13:31 IST)
ಕೇರಳ: ಸುಪ್ರೀಂಕೋರ್ಟ್ ಅಯ್ಯಪ್ಪ ಸ್ವಾಮಿ ದೇಗುಲ ಪ್ರವೇಶಕ್ಕೆ ಮಹಿಳೆಯರಿಗೆ ಅವಕಾಶ ಕಲ್ಪಿಸಿದರೂ, ಸ್ವಾಭಿಮಾನವುಳ್ಳ ಸಭ್ಯಸ್ಥ ಮಹಿಳೆಯರು, ಒಳ್ಳೆಯ ಮನೆತನದಲ್ಲಿ ಹುಟ್ಟಿದ ಮಹಿಳೆಯರು ದೇಗುಲ ಪ್ರವೇಶಿಸುವುದಿಲ್ಲ ಎಂದು ಅಯ್ಯಪ್ಪ ಸ್ವಾಮಿ ದೇಗುಲದ ಟಿಡಿಬಿ ಅಧ್ಯಕ್ಷ ಪ್ರಯರ್ ಗೋಪಾಲಕೃಷ್ಣನ್ ವಿವಾದಿತ ಹೇಳಿಕೆ ನೀಡಿದ್ದಾರೆ.

ನಿನ್ನೆಯಷ್ಟೇ ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲಕ್ಕೆ ಮಹಿಳೆಯರಿಗೆ ಪ್ರವೇಶ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆದಿದೆ. ಐವರು ನ್ಯಾಯಮೂರ್ತಿಗಳ ಪೀಠ ತೀರ್ಪು ನೀಡಲಿದೆ ಎಂದು ಸುಪ್ರೀಂ ಹೇಳಿತ್ತು.  ಈ ಕುರಿತು ಪ್ರತಿಕ್ರಿಯಿಸಿರುವ ಗೋಪಾಲಕೃಷ್ಣನ್,  ಋತುಸ್ರಾವವಾಗುವ ಮಹಿಳೆಯರಿಗೆ ದೇಗುಲ ಪ್ರವೇಶಕ್ಕೆ ಅವಕಾಶ ನೀಡಬಾರದು ಎಂಬ ನಿಲುವಿಗೆ ತಾವು ಬದ್ಧವಿರುವುದಾಗಿ ಹೇಳಿದ್ದಾರೆ.

ಮಹಿಳೆಯರಿಗೆ ದೇಗುಲ ಪ್ರವೇಶಕ್ಕೆ ಅವಕಾಶ ನೀಡಿದರೆ ಶಬರಿಮಲೆ ಪ್ರವಾಸಿ ಸ್ಥಳವಾಗಲಿದೆ. ನಾವು ಶಬರಿಮಲೆಯನ್ನು ಥೈಲಾಂಡ್ ಆಗಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಆರೋಪಿಗಳ ರೇಖಾಚಿತ್ರ ಬಿಡುಗಡೆ