ಮಾನನಷ್ಟ ಮೊಕದ್ದಮೆ: ಶಿವಸೇನಾ ಸಂಸದ ಸಂಜಯ್‌ ರಾವುತ್‌ಗೆ 15 ದಿನ ಜೈಲು

Sampriya
ಗುರುವಾರ, 26 ಸೆಪ್ಟಂಬರ್ 2024 (14:03 IST)
Photo Courtesy X
ಮುಂಬೈ: ಶಿವಸೇನಾ ಯುಬಿಟಿ ಸಂಸದ ಸಂಜಯ್‌ ರಾವುತ್‌ ಅವರಿಗೆ ಬಿಜೆಪಿ ನಾಯಕ ಕಿರಿತ್ ಸೋಮಯ್ಯ ಅವರ ಪತ್ನಿ ಡಾ. ಮೇಧಾ ಅವರು ದಾಖಲಿಸಿದ್ದ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ನ್ಯಾಯಾಲಯ 15 ದಿನಗಳ ಜೈಲು ಶಿಕ್ಷೆ ವಿಧಿಸಿದೆ.

ಮೀರಾ ಬಾಯಂಧರ್ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಾಣ ಮತ್ತು ನಿರ್ವಹಣೆ ಕಾಮಗಾರಿಯಲ್ಲಿ ನಡೆದಿದೆ ಎನ್ನಲಾದ ₹ 100 ಕೋಟಿ ಮೊತ್ತದ ಹಗರಣದಲ್ಲಿ ನನ್ನ ಮತ್ತು ನನ್ನ ಪತಿ ಕಿರೀಟ್ ಸೋಮಯ್ಯ ಅವರ ವಿರುದ್ಧ ಸಂಜಯ್ ರಾವುತ್ ಆಧಾರರಹಿತ ಮತ್ತು ಮಾನಹಾನಿಕರ ಆರೋಪಗಳನ್ನು ಮಾಡಿದ್ದಾರೆ ಎಂದು ಆರೋಪಿಸಿ ಮೇಧಾ ನ್ಯಾಯಾಲಯದ ಮೆಟ್ಟಿಲೇರಿದ್ದರು.

ರಾವುತ್ ಮಾಧ್ಯಮಗಳಿಗೆ ನೀಡಿರುವ ಹೇಳಿಕೆಗಳು ಮಾನಹಾನಿಕರವಾಗಿದ್ದು, ಸಾರ್ವಜನಿಕರ ದೃಷ್ಟಿಯಲ್ಲಿ ನನ್ನ ಚಾರಿತ್ರ್ಯ ಹದಗೆಡುವಂಥ ಹೇಳಿಕೆಗಳನ್ನು ನೀಡಿದ್ದಾರೆ' ಎಂದು ಆರೋಪಿಸಿ ಮೇಧಾ ಅವರು ಕಳೆದ ವರ್ಷವೇ ಮಝಗಾಂವ್‌ ಮ್ಯಾಜಿಸ್ಟ್ರೇಟ್‌ ಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಮಾಜಿ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಬಣದ ನಾಯಕ ರಾವುತ್‌ ವಿರುದ್ಧ ಐಪಿಸಿ ಸೆಕ್ಷನ್‌ 499ರ ಅಡಿಯಲ್ಲಿ ಪ್ರಕರಣದ ದಾಖಲಿಸಿಕೊಳ್ಳಬೇಕು ಎಂದು ಅವರು ನ್ಯಾಯಾಲಯಕ್ಕೆ ಕೋರಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳನ್ನು ಟಾರ್ಗೆಟ್ ಮಾಡಲಾಗಿದೆ: ಡಿಸಿಎಂ ಪವನ್ ಕಲ್ಯಾಣ್

ರಾಜ್ಯದಲ್ಲಿರುವ ಡ್ರಗ್ಸ್‌ ದಂಧೆ ವಿರುದ್ಧ ಕಠಿಣ ಕ್ರಮ, ಪೆಡ್ಲರ್‌ಗಳಿಗೆ ನಡುಕ

ಮತ್ತಷ್ಟು ಹಣ ಕೊಡದಿದ್ದರೆ ಬೆತ್ತಲೆ ಫೋಟೋ ವೈರಲ್ ಬೆದರಿಕೆ, ಯುವಕ ಆತ್ಮಹತ್ಯೆ

ಮೋದಿ ಬಳಿಕ ಬಿಜೆಪಿಯಿಂದ ಪ್ರಧಾನಿ ಅಭ್ಯರ್ಥಿ ಯಾರು: ಕೊನೆಗೂ ತಿಳಿಸಿದ ಮೋಹನ್ ಭಾಗವತ್

ಸಿದ್ದರಾಮಯ್ಯ ಇರುವಷ್ಟು ದಿನ ಉತ್ತಮ ಹೆಜ್ಜೆ ಇಡಲಿ: ವಿಜಯೇಂದ್ರ

ಮುಂದಿನ ಸುದ್ದಿ
Show comments