ನವದೆಹಲಿ : ಆಡಮ್ಸ್ ಬ್ರಿಡ್ಜ್ ಎಂದೂ ಕರೆಯಲ್ಪಡುವ ರಾಮಸೇತುವನ್ನು ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸುವಂತೆ ಕೋರಿ ಮಾಜಿ ರಾಜ್ಯಸಭಾ ಸದಸ್ಯ ಡಾ. ಸುಬ್ರಮಣಿಯನ್ ಸ್ವಾಮಿ ಅವರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಇದರ ಬೆನ್ನಲ್ಲೇ ಟ್ವೀಟ್ ಮಾಡಿದ ಸುಬ್ರಮಣಿಯನ್ ಸ್ವಾಮಿ, ರಾಮ ಸೇತುವನ್ನು ಪ್ರಾಚೀನ ಪರಂಪರೆಯ ಸ್ಮಾರಕವನ್ನಾಗಿ ಘೋಷಣೆ ಮಾಡಲು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ.
ಈ ನಿರ್ಧಾರದ ಬಗ್ಗೆ ಅಫಿಡವಿಟ್ ಸಲ್ಲಿಸಲು ನ್ಯಾಯಾಲಯ ಸರ್ಕಾರಕ್ಕೆ ಸೂಚಿಸಿದೆ. ಒಂದು ವೇಳೆ ರಾಮಸೇತು ರಾಷ್ಟ್ರೀಯ ಸ್ಮಾರಕವೆಂದು ಘೋಷಣೆಯಾದರೆ ಅದು ನನ್ನ ಗೆಲುವು. ಇಲ್ಲದೇ ಹೋದರೆ, ಅದು 2024ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಸೋಲು ಎಂದು ಬರೆದಿದ್ದಾರೆ.