ನವದೆಹಲಿ : ರಷ್ಯಾದ ಮಾಸ್ಕೋದಿಂದ ದೆಹಲಿಗೆ ಬಂದಿಳಿದ ವಿಮಾನದಲ್ಲಿ ಬಾಂಬ್ ಇರುವುದಾಗಿ ತಡರಾತ್ರಿ ಎಚ್ಚರಿಕೆಯ ಇಮೇಲ್ ಬಂದಿದ್ದು,
ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರೀ ಭದ್ರತೆ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆದರಿಕೆ ಮೇಲ್ ಬಂದ ನಂತರ ವಿಮಾನ ನಿಲ್ದಾಣದಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ವಿಮಾನವನ್ನು ಪರಿಶೀಲಿಸಲಾಗುತ್ತಿದೆ.
ಟರ್ಮಿನಲ್ 3ಕ್ಕೆ ಬರುತ್ತಿದ್ದ ವಿಮಾನ ಸಂಖ್ಯೆ SU232ರಲ್ಲಿ ಬಾಂಬ್ ಇರುವುದಾಗಿ ರಾತ್ರಿ 11:55ಕ್ಕೆ ಕರೆ ಬಂದಿತು. ಇದರಿಂದಾಗಿ ಒಟ್ಟು 386 ಹಾಗೂ 16 ಸಿಬ್ಬಂದಿಯನ್ನ ವಿಮಾನದಿಂದ ಕೆಳಗಿಳಿಸಿ ಪರಿಶೀಲಿಸಲಾಯಿತು. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.