Select Your Language

Notifications

webdunia
webdunia
webdunia
webdunia

ದೆಹಲಿ ವಿಧಾನಸಭಾ ಚುನಾವಣೆ ಮತಎಣಿಕೆ ಆರಂಭ: ರಾಷ್ಟ್ರ ರಾಜಧಾನಿಯಲ್ಲಿ ಕಮಲ ಕಿಲಕಿಲ

ದೆಹಲಿ ವಿಧಾನಸಭಾ ಚುನಾವಣೆ ಮತಎಣಿಕೆ ಆರಂಭ: ರಾಷ್ಟ್ರ ರಾಜಧಾನಿಯಲ್ಲಿ ಕಮಲ ಕಿಲಕಿಲ

Sampriya

ನವದೆಹಲಿ , ಶನಿವಾರ, 8 ಫೆಬ್ರವರಿ 2025 (09:22 IST)
ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ಅಂಚ ಮತ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ ಪಡೆದುಕೊಂಡಿದೆ. ಬಿಗಿ ಭದ್ರತೆಯ ನಡುವೆ 19 ಕೇಂದ್ರಗಳಲ್ಲಿ ಮತ ಎಣಿಕೆ ಆರಂಭವಾಗಿದೆ.

ಮತ ಎಣಿಕೆ ಆರಂಭದಲ್ಲೇ ಕಳೆಗಟ್ಟಿದ್ದು ಮುಸ್ಲಿಂ ಪ್ರಾಬಲ್ಯವುಳ್ಳ ಕ್ಷೇತ್ರಗಳಲ್ಲೂ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಇತ್ತ ಆಪ್‌ನಲ್ಲಿ ಘಟಾನುಘಟಿ ನಾಯಕರು ಹಿನ್ನಡೆ ಅನುಭವಿಸಿದ್ದರೂ ಅರ್ಧಕ್ಕಿಂತ ಹೆಚ್ಚು ಕ್ಷೇತ್ರಗಳಿಗೆ ಬಿಜೆಪಿಗೆ ನೇರ ಪೈಪೋಟಿ ನೀಡುತ್ತಿದೆ.

ಬೆಳಗ್ಗೆ 8:50ರ ಸುಮಾರಿಗೆ ಬಿಜೆಪಿ ಮ್ಯಾಜಿಕ್‌ ನಂಬರ್‌ ತಲುಪಿದೆ. ಬಿಜೆಪಿ 40, ಎಎಪಿ 27 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್‌ ಕೇವಲ ಒಂದು ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ. ಫಲಿತಾಂಶದ ಆರಂಭದಲ್ಲೇ ಮಾಜಿ ಸಿಎಂ ಅರವಿಂದ್‌ ಕೇಜ್ರಿವಾಲ್‌, ಹಾಲಿ ಸಿಎಂ ಅತಿಶಿ, ಮನೀಶ್‌ ಸಿಸೋಡಿಯಾ, ಸತ್ಯೇಂದ್ರ ಜೈನ್‌, ಕಪಿಲ್‌ ಮಿಶ್ರಾ ಸೇರಿ ಘಟಾನುಘಟಿ ನಾಯಕರು ಹಿನ್ನಡೆ ಅನುಭವಿಸಿದ್ದರು.

ದೆಹಲಿಯ 70 ಕ್ಷೇತ್ರಗಳಿಗೆ ಫೆಬ್ರವರಿ 5ರಂದು ನಡೆದ ಚುನಾವಣೆಯಲ್ಲಿ 60.42% ರಷ್ಟು ಮತದಾನ ನಡೆದಿತ್ತು. ಸರಳ ಬಹುಮತಕ್ಕೆ 36 ಸ್ಥಾನಗಳ ಅಗತ್ಯವಿದೆ.

2013ರ ಚುನಾವಣೆಯಲ್ಲಿ ಬಿಜೆಪಿ 31, ಆಪ್‌ 28, ಕಾಂಗ್ರೆಸ್‌ 08 ಸ್ಥಾನಗಳನ್ನು ಗೆದ್ದುಕೊಂಡಿದ್ದರೆ ಇತರರು ಮೂರು ಸ್ಥಾನ ಗೆದ್ದಿದ್ದರು. ಆಪ್‌ಗೆ ಕಾಂಗ್ರೆಸ್‌ ಬೆಂಬಲ ನೀಡಿದ್ದರಿಂದ ಕೇಜ್ರಿವಾಲ್‌ ಮೊದಲ ಬಾರಿಗೆ ಮುಖ್ಯಮಂತ್ರಿ ಹುದ್ದೆಯನ್ನು ಅಲಂಕರಿಸಿದ್ದರು.

ಕಳೆದ 25 ವರ್ಷಗಳಿಂದ ಮರೀಚಿಕೆಯಾಗಿರುವ ಅಧಿಕಾರವನ್ನು ದಕ್ಕಿಸಿಕೊಳ್ಳಲು ಬಿಜೆಪಿ ಸರ್ವ ಶಕ್ತಿಗಳನ್ನು ಪಣಕ್ಕೊಡಿದೆ. ದಶಕದಿಂದ ಇರುವ ಅಧಿಕಾರವನ್ನು ಉಳಿಸಿಕೊಳ್ಳಲು ಹಿಂದೆಂದಿಗಿಂತಲೂ ಹೆಚ್ಚು ಉಚಿತ ಯೋಜನೆಗಳನ್ನು ಆಪ್ ಘೋಷಿಸಿದೆ. ಒಂದಿಷ್ಟು ಸೀಟ್‌ಗಳನ್ನಾದರೂ ಗೆದ್ದು ಮಾನ ಉಳಿಸಿಕೊಳ್ಳಲು ಕಾಂಗ್ರೆಸ್ ಸಹ ಭರವಸೆಗಳ ಮೇಲೆ ಭರವಸೆ ನೀಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ತುಮಕೂರು: ಡೆಂಘಿ ಜ್ವರಕ್ಕೆ 7 ವರ್ಷದ ಬಾಲಕ ಬಲಿ