ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯ ಮತಎಣಿಕೆ ಆರಂಭವಾಗಿದೆ. ಚುನಾವಣೋತ್ತರ ಸಮೀಕ್ಷೆಗಳ ಲೆಕ್ಕಾಚಾರದಂತೆ ಬಿಜೆಪಿಯು ಆರಂಭಿಕ ಮುನ್ನಡೆ ಪಡೆದಿದೆ.
ಎಎಪಿ ನಾಲ್ಕನೇ ಅವಧಿಗೆ ಅಧಿಕಾರಕ್ಕೆ ಬರುತ್ತದೆಯೇ ಅಥವಾ 27 ವರ್ಷಗಳ ನಂತರ ಬಿಜೆಪಿ ಸರ್ಕಾರ ರಚಿಸುತ್ತದೆಯೇ ಎಂಬುದು ಮಧ್ಯಾಹ್ನದ ವೇಳೆಗೆ ಗೊತ್ತಾಗಲಿದೆ. ದೆಹಲಿಯ ಗದ್ದುಗೆಯಲ್ಲಿ ಬಿಜೆಪಿಯನ್ನು ಪ್ರತಿಷ್ಠಾಪಿಸಲು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕ ಸಾಕಷ್ಟು ಕಸರತ್ತು ನಡೆಸಿದ್ದರು.
ಬೆಳಗ್ಗೆ 9 ಗಂಟೆ ಸುಮಾರಿಗೆ ಬಿಜೆಪಿ ಮ್ಯಾಜಿಕ್ ನಂಬರ್ ತಲುಪಿದೆ. ಬಿಜೆಪಿ 40, ಎಎಪಿ 27 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ರೆ ಕಾಂಗ್ರೆಸ್ ಕೇವಲ ಒಂದು ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ. ಇದೇ ಮುನ್ನಡೆಯನ್ನು ಬಿಜೆಪಿ ಕಾಯ್ದುಕೊಂಡರೆ ಸುದೀರ್ಘ ವನವಾಸದ ಬಳಿಕ ಬಿಜೆಪಿಗೆ ಅಧಿಕಾರಕ್ಕೆ ಏರಲಿದೆ.
ಎಣಿಕೆ ಪ್ರಕ್ರಿಯೆಯು ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾಗಲಿದೆ. ಮಧ್ಯಾಹ್ನದ ವೇಳೆಗೆ ಸ್ಪಷ್ಟ ಚಿತ್ರಣ ಹೊರಬೀಳುವ ಸಾಧ್ಯತೆ ಇದೆ. ಕೇಂದ್ರ ಚುನಾವಣಾ ಆಯೋಗದ ಪ್ರಕಾರ, ಶೇಕಡಾ 60.54ರಷ್ಟು ಮತಗಳು ಚಲಾವಣೆಯಾಗಿದೆ. ಒಟ್ಟು 70 ಕ್ಷೇತ್ರಗಳಿಗೆ 699 ಅಭ್ಯರ್ಥಿಗಳು ಕಣದಲ್ಲಿದ್ದು ಅದೃಷ್ಟ ಪರೀಕ್ಷಿಸಿಕೊಳ್ತಿದ್ದಾರೆ.
27 ವರ್ಷಗಳಿಂದ ಮರೀಚಿಕೆಯಾಗಿರುವ ಅಧಿಕಾರವನ್ನು ದಕ್ಕಿಸಿಕೊಳ್ಳಲು ಬಿಜೆಪಿ ಸರ್ವ ಶಕ್ತಿಗಳನ್ನು ಪಣಕ್ಕೊಡಿದೆ. ದಶಕದಿಂದ ಇರುವ ಅಧಿಕಾರವನ್ನು ಉಳಿಸಿಕೊಳ್ಳಲು ಹಿಂದೆಂದಿಗಿಂತಲೂ ಹೆಚ್ಚು ಉಚಿತ ಯೋಜನೆಗಳನ್ನು ಆಪ್ ಘೋಷಿಸಿದೆ. ಒಂದಿಷ್ಟು ಸೀಟ್‌ಗಳನ್ನಾದರೂ ಗೆದ್ದು ಮಾನ ಉಳಿಸಿಕೊಳ್ಳಲು ಕಾಂಗ್ರೆಸ್ ಸಹ ಭರವಸೆಗಳ ಮೇಲೆ ಭರವಸೆ ನೀಡಿದೆ.<>