ಪ್ರಧಾನಿ ಮೋದಿ ಹೇಳಿಕೆಗೆ ತಿರುಗೇಟು ನೀಡಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

Webdunia
ಸೋಮವಾರ, 16 ಜುಲೈ 2018 (13:22 IST)
ನವದೆಹಲಿ : ಪ್ರಧಾನಿ ಮೋದಿ ಅವರು ಕಾಂಗ್ರೆಸ್ ಪಕ್ಷ ಕೇವಲ ಮುಸ್ಲಿಮರಿಗಾಗಿ ಮಾತ್ರ ಕೆಲಸ ಮಾಡುವ ಪಕ್ಷವಾಗಿದೆ ಎಂದು ಟೀಕಿಸಿರುವುದಕ್ಕೆ ತಿರುಗೇಟು ನೀಡಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಹಿಂದೂ-ಮುಸ್ಲಿಂ ಬಾಂಧವ್ಯದಿಂದ ಮಾತ್ರವೇ ಭಾರತ ನಂಬರ್ ಒನ್ ಆಗುತ್ತದೆ ಎಂದು ಹೇಳಿದ್ದಾರೆ.


ಇಂದೋರ್ ನಲ್ಲಿ ನಡೆದ ಪಕ್ಷದ ಸಭೆಯಲ್ಲಿ ಮಾತನಾಡಿದ ಕೇಜ್ರಿವಾಲ್ ಅವರು,’ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಾಲ್ಕು ವರ್ಷಗಳ ಬಳಿಕವೂ ಪ್ರಧಾನಿ ಮೋದಿ ಹಿಂದೂ-ಮುಸ್ಲಿಂ ಸಮಸ್ಯೆಗಳ ಕುರಿತು ಮಾತನಾಡುತ್ತಿದ್ದಾರೆ ಎಂದರೆ ಅವರ ಸಾಧನೆ ಏನು? ಕಳೆದ ನಾಲ್ಕು ವರ್ಷಗಳಲ್ಲಿ ಅವರ ಸರ್ಕಾರ ಏನು ಮಾಡುತ್ತಿತ್ತು ಎಂದು ಟೀಕಿಸಿದ್ದಾರೆ.


ಹಾಗೇ ‘ಪ್ರಧಾನಿ ಮೋದಿ ಅವರ ಮಾತು ಕೇಳಿದರೆ ಅವರ ಸರ್ಕಾರ ಇನ್ನೂ ಯಾವ ಕೆಲಸವನ್ನೂ ಮಾಡಿಲ್ಲ ಎಂದೆನಿಸುತ್ತಿದೆ. ತ್ರಿವಳಿ ತಲಾಖ್ ಬಗ್ಗೆ ತಮ್ಮ ಸಾಧನೆಯ ಬಗ್ಗೆ ಮಾತನಾಡುವ ಮೋದಿ, ತಮ್ಮದೇ ಪಕ್ಷ ಪ್ರತಿಪಕ್ಷ ಸ್ಥಾನದಲ್ಲಿದ್ದಾಗ ತ್ರಿವಳಿ ತಲ್ಲಾಖ್ ಗೆ ಬೆಂಬಲ ನೀಡಬಹುದಿತ್ತು, ಅಂದು ಬೆಂಬಲ ನೀಡದೇ ತಮ್ಮ ರಾಜಕೀಯ ಲಾಭಕ್ಕಾಗಿ ಅದನ್ನು ಬಿಜೆಪಿ ಬಳಸಿಕೊಂಡಿತು’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Karnataka Weather: ದಸರಾ ಸಂದರ್ಭದಲ್ಲಿ ರಾಜ್ಯದಲ್ಲಿ ಮಳೆಯಿರುತ್ತಾ ಇಲ್ಲಿದೆ ವಿವರ

OM ಸಿಸ್ಟಮ್, ಒಲಿಂಪಸ್ ನಿಂದ ಎರಡು ಹೊಸ ಇಮೇಜಿಂಗ್ ಉತ್ಪನ್ನಗಳ ಬಿಡುಗಡೆ

Bannerghatta, ಸಫಾರಿ ವೇಳೆಯೇ ಪ್ರವಾಸಿಗನಿಗೆ ಹೃದಯಾಘಾತ

ಮನ್‌ ಕಿ ಬಾತ್‌ನಲ್ಲೂ ಎಸ್‌ ಎಲ್ ಬೈರಪ್ಪರ ಕೊಡುಗೆ ನೆನೆದ ಪ್ರಧಾನಿ ಮೋದಿ

ಮುಂದಿನ ಸುದ್ದಿ
Show comments