ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಹಾಗೂ ಭ್ರಷ್ಟಾಚಾರದ ಆರೋಪದಲ್ಲಿ ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನು ನ್ಯಾಯಾಲಯ ಜುಲೈ 3ರ ವರೆಗೆ ವಿಸ್ತರಿಸಿದೆ.
ಸಿಬಿಐ ಮತ್ತು ಇ.ಡಿಯ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ಪ್ರಕರಣ ಸಂಬಂಧ ವಿಚಾರಣೆ ನಡೆಸಿ ನ್ಯಾಯಾಂಗ ಬಂಧನವನ್ನು ವಿಸ್ತರಿಸಿದ್ದಾರೆ. ಪ್ರಕರಣದಲ್ಲಿ ಜಾಮೀನು ಕೋರಿ ಕವಿತಾ ಅವರು ಮೇ 15ರಂದು ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ದೆಹಲಿ ಅಬಕಾರಿ ನೀತಿಯಲ್ಲಿಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಇದುವರೆಗೆ ಸಿಎಂ ಅರವಿಂದ್ ಕೇಜ್ರಿವಾಲ್ ಸೇರಿದಂತೆ 18ಮಂದಿಯನ್ನು ಬಂಧಿಸಿದೆ. ಇನ್ನೂ ಕವಿತಾ ಅವರನ್ನು ಮಾ 15ರಂದು ಬಂಧಿಸಲಾಗಿದೆ.
ಮಾ.15ರಂದು ಇ.ಡಿ ಕವಿತಾ ಅವರನ್ನು ಬಂಧಿಸಿತ್ತು.