ದೆಹಲಿ ಹೈಕೋರ್ಟ್ ಆವರಣದೊಳಗೆ ಬಾಂಬ್ ಇಡಲಾಗಿದೆ ಎನ್ನುವ ಬೆದರಿಕೆ ಕರೆಬಂದ ನಂತರ ಪೊಲೀಸರು ಹೈಕೋರ್ಟ್ ಸುತ್ತಮುತ್ತಲು ಪ್ರದೇಶದಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಹೈಕೋರ್ಟ್ ಆವರಣದಲ್ಲಿ ಬಾಂಬ್ ಇಡಲಾಗಿದೆ ಎಂದು ಅನಾಮಧೇಯ ವ್ಯಕ್ತಿಯೊಬ್ಬರು ಪೊಲೀಸರಿಗೆ ಕರೆ ಮಾಡಿ ಬೆದರಿಕೆ ಹಾಕಿದ ಕೂಡಲೇ, ಪೊಲೀಸರು ಹೈಕೋರ್ಟ್‌ನಲ್ಲಿ ಭಾರಿ ತಪಾಸಣಾ ಕಾರ್ಯ ಕೈಗೆತ್ತಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ದೆಹಲಿ ಪೊಲೀಸರು, ಸ್ವಾತ್ ತಂಡಗಳು, ಅಗ್ನಿಶಾಮಕ ದಳ ಮತ್ತು ಬಾಂಬ್ ನಿಷ್ಟ್ರೀಯ ದಳಗಳು ಸ್ಥಳಕ್ಕೆ ಧಾವಿಸಿದೆ. ದೆಹಲಿ ಹೈಕೋರ್ಟ್ ಸುತ್ತ ಹೈಅಲರ್ಟ್ ಜಾರಿಗೊಳಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.