Webdunia - Bharat's app for daily news and videos

Install App

ಆದಾಯ ತೆರಿಗೆ ಇಲಾಖೆಗೆ 125 ಕೋಟಿ ಒಪ್ಪಿಸಿದ ತೆರಿಗೆ ವಂಚಕ ಲಾಯರ್

Webdunia
ಶುಕ್ರವಾರ, 21 ಅಕ್ಟೋಬರ್ 2016 (14:49 IST)
ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳ ದಾಳಿಯಿಂದ ಹೆದರಿದ ದೆಹಲಿ ಮೂಲದ ವಕೀಲರೊಬ್ಬರು 125 ಕೋಟಿ ರೂಪಾಯಿಗಳ ಕಪ್ಪು ಹಣವನ್ನು ಘೋಷಿಸಿಕೊಂಡಿದ್ದಾರೆ. 125 ಕೋಟಿ ರೂಪಾಯಗಳನ್ನು ಐಟಿ ಅಧಿಕಾರಿಗಳ ಸುರ್ಪದಿಗೆ ಒಪ್ಪಿಸಿದ್ದಾರೆ.
 
ವಕೀಲರು ಅಕ್ರಮ ಆಸ್ತಿ ಸಂಪಾದಿಸಿದ್ದಾರೆ ಎನ್ನುವ ಮಾಹಿತಿ ಪಡೆದ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು, ವಕೀಲನ ದಕ್ಷಿಣ ದೆಹಲಿಯಲ್ಲಿರುವ ಹಲವಾರು ಐಷಾರಾಮಿ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ.
 
ನವದೆಹಲಿಯ ಪ್ರತಿಷ್ಠಿತ ಜೋರ್ ಬಾಘ್ ಪ್ರದೇಶದ ಲುಟೆನ್ಸ್ ಝೋನ್‌ನಲ್ಲಿ ಆರೋಪಿ ವಕೀಲ ಭಾರಿ ಮೌಲ್ಯದ ಮನೆ ಖರೀದಿಸಿರುವುದು ಆದಾಯ ತೆರಿಗೆ ಇಲಾಖೆಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಅವರ ವಿರುದ್ಧ ಕೇಸ್ ದಾಖಲಿಸಲಾಗಿತ್ತು.
 
ಆರೋಪಿ ವಕೀಲ ಮತ್ತಷ್ಟು ಕೋಟಿ ಕೋಟಿ ರೂಪಾಯಿಗಳ ತೆರಿಗೆ ವಂಚನೆ ಮಾಡಿದ್ದು, ಮುಂಬರುವ ಕೆಲ ದಿನಗಳಲ್ಲಿ ಸತ್ಯ ಸಂಗತಿ ಬಹಿರಂಗವಾಗಲಿದೆ ಎಂದು ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments