Select Your Language

Notifications

webdunia
webdunia
webdunia
webdunia

ಸುಪ್ರೀಂ ಆವರಣದಲ್ಲೇ ಪೊಲೀಸ್ ಸುಸೈಡ್

ಸುಪ್ರೀಂ ಆವರಣದಲ್ಲೇ ಪೊಲೀಸ್ ಸುಸೈಡ್
ನವದೆಹಲಿ , ಸೋಮವಾರ, 2 ಜನವರಿ 2017 (15:04 IST)
ಮುಖ್ಯ ಪೊಲೀಸ್ ಪೇದೆಯೊಬ್ಬರು ಸುಪ್ರೀಂಕೋರ್ಟ್ ಆವರಣದಲ್ಲಿಯೇ ಆತ್ಮಹತ್ಯೆಗೆ ಶರಣಾದ ಹೇಯ ಘಟನೆ ಸೋಮವಾರ ಮುಂಜಾನೆ ನಡೆದಿದೆ. 

 
ಮೃತನನ್ನು ಕೋರ್ಟ್ ಆವರಣದಲ್ಲಿ ಮೇಲ್ವಿಚಾರಣೆ ನಡೆಸುತ್ತಿದ್ದ ಮುಖ್ಯಪೇದೆ ಚಾಂದ್ ಪಾಲ್ ಎಂದು ಗುರುತಿಸಲಾಗಿದ್ದು ನ್ಯಾಯಾಲಯದ ಗೇಟ್ ಬಳಿ ಇಂದು ಬೆಳಗಿನ ಜಾವ ಸರ್ವಿಸ್ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಅವರು ಸಾವನ್ನಪ್ಪಿದ್ದಾರೆ. 
 
ಗುಂಡಿನ ಶಬ್ಧ ಕೇಳುತ್ತಿದ್ದಂತೆ ಅಲ್ಲೇ ಹತ್ತಿರದಲ್ಲಿ ಕರ್ತವ್ಯ ನಿರತರಾಗಿದ್ದ ಪೊಲೀಸರು ಸ್ಥಳಕ್ಕೋಡಿ ಬಂದಿದ್ದಾರೆ. ಆದರೆ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಪಾಲ್ ಕೊನೆಯುಸಿರೆಳೆದಿದ್ದಾರೆ. 
 
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಮಹಿಳಾ ರೋಗಿಗೆ ಲೈಂಗಿಕ ಕಿರುಕುಳ ನೀಡಿದ ವೈದ್ಯನ ಬಂಧನ