Select Your Language

Notifications

webdunia
webdunia
webdunia
webdunia

ಅಮಿತ್ ಶಾ ಬಗ್ಗೆ ಸುಳ್ಳು ಮಾಹಿತಿ ಹರಿಯಬಿಟ್ಟವರ ವಿರುದ್ಧ ದೂರು

Amit Shah

Krishnaveni K

ನವದೆಹಲಿ , ಸೋಮವಾರ, 29 ಏಪ್ರಿಲ್ 2024 (13:22 IST)
ನವದೆಹಲಿ: ಕೇಂದ್ರ ಗೃಹಸಚಿವ ಅಮಿತ್ ಶಾ ಹೇಳಿದ್ದಾರೆನ್ನಲಾದ ನಕಲಿ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ದೆಹಲಿ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.

ಗೃಹ ಸಚಿವ ಅಮಿತ್ ಶಾ ಎಸ್ ಸಿ, ಎಸ್ಟಿ ಹಿಂದುಳಿದ ವರ್ಗದವರ ಮೀಸಲಾತಿ ಬಗ್ಗೆ ಹೇಳುತ್ತಿದ್ದಾರೆನ್ನಲಾದ ವಿಡಿಯೋವೊಂದು ವೈರಲ್ ಆಗಿತ್ತು. ಅಸಲಿಗೆ ಈ ವಿಡಿಯೋದಲ್ಲಿರುವಂತಹ ಹೇಳಿಕೆಯನ್ನು ಅಮಿತ್ ಶಾ ನೀಡಿಯೇ ಇರಲಿಲ್ಲ. ಆದರೆ ಇದು ಸೋಷಿಯಲ್ ಮೀಡಿಯಾ ಎಕ್ಸ್ ಮತ್ತು ಫೇಸ್ ಬುಕ್ ಖಾತೆಗಳಲ್ಲಿ ವೈರಲ್ ಆಗಿತ್ತು.

ಈ ರೀತಿ ಅಮಿತ್ ಶಾರ ನಕಲಿ ವಿಡಿಯೋ ಸಮಾಜದ ಸೌಹಾರ್ದತೆಗೆ ಧಕ್ಕೆ ಬರುವಂತಿತ್ತು. ಹೀಗಾಗಿ ತಪ್ಪಿತಸ್ಥರನ್ನು ಪತ್ತೆ ಮಾಡಿ ತಕ್ಕ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಹೇಳಿದ್ದಾರೆ. ಈ ವಿಡಿಯೋ ನಿರ್ಮಿಸಿದ್ದು ಯಾರು ಎಂದು ಮೊದಲು ಪತ್ತೆ ಮಾಡಲಾಗುವುದು. ನಂತರ ಇದರ ಹಿಂದೆ ಯಾರಿದ್ದಾರೆ ಎಂದು ಪತ್ತೆ ಹಚ್ಚುವುದಾಗಿ ಪೊಲೀಸರು ಹೇಳಿದ್ದಾರೆ.

ಈ ಬಗ್ಗೆ ನಿನ್ನೆ ದೆಹಲಿ ಪೊಲೀಸರಿಗೆ ದೂರು ಸಲ್ಲಿಸಲಾಗಿತ್ತು. ಈ ಬಗ್ಗೆ ಇದೀಗ ಎಫ್ಐಆರ್ ದಾಖಲಾಗಿದೆ. ಮೀಸಲಾತಿ ಎನ್ನುವುದು ನಮ್ಮ ದೇಶದಲ್ಲಿ ಸೂಕ್ಷ್ಮ ವಿಚಾರವಾಗಿದ್ದು, ಇದರ ಬಗ್ಗೆ ಏನೇ ತಪ್ಪು ಸಂದೇಶ ರವಾನೆಯಾದರೂ ಅದು ಇನ್ನೊಂದು ರೀತಿಯ ಸಮಸ್ಯೆಗೆ ಕಾರಣವಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಪಾರ್ಟ್ ಮೆಂಟ್ ನಲ್ಲಿ ಮಗುವನ್ನು ರಕ್ಷಿಸಿದ ದೃಶ್ಯ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್