ದೆಹಲಿ: ಕೆಂಪುಕೋಟೆ ಬಳಿ ಇಂದು ಸಂಭವಿಸಿದ ಕಾರು ಸ್ಪೋಟದಲ್ಲಿ ಕನಿಷ್ಠ 9 ಮಂದಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ನಗರದಾದ್ಯಂತ ಈಗ ಹೈ ಅಲರ್ಟ್ ಘೋಷಿಸಲಾಗಿದೆ.
ಕೆಂಪುಕೋಟೆಯ ಮೆಟ್ರೋ ಸ್ಟೇಷನ್ ಗೇಟ್ 1 ರ ಬಳಿ ಸ್ಪೋಟ ಸಂಭವಿಸಿದೆ. ಸ್ಪೋಟದ ತೀವ್ರತೆಗೆ ಮೃತದೇಹಗಳು ಛಿದ್ರ ಛಿದ್ರವಾಗಿ ರಸ್ತೆಯಲ್ಲಿ ಬಿದ್ದಿದೆ. ಹಲವರು ಗಾಯಗೊಂಡಿದ್ದು ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳ ಬೆಂಕಿ ನಿಯಂತ್ರಣಕ್ಕೆ ತಂದಿದೆ. ಇದೀಗ ಘಟನೆಯಲ್ಲಿ ಎಷ್ಟು ಮಂದಿ ಸಾವನ್ನಪ್ಪಿದ್ದಾರೆ ಎಂಬ ಬಗ್ಗೆ ದೆಹಲಿ ಪೊಲೀಸ್ ಅಥವಾ ಅಧಿಕಾರಿಗಳಿಂದ ಅಧಿಕೃತ ಮಾಹಿತಿ ಇನ್ನಷ್ಟೇ ಬರಬೇಕಿದೆ.
ಸದ್ಯದ ಪರಿಸ್ಥಿತಿ ನೋಡಿದರೆ ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಈ ಸ್ಪೋಟದ ತೀವ್ರತೆ ಗಮನಿಸಿದರೆ ಭಾರೀ ಸ್ಪೋಟಕ ಬಳಸಿರುವುದು ಖಚಿತವಾಗುತ್ತದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.