ದೆಹಲಿ ಸ್ಪೋಟಕ್ಕೆ ಕನಿಷ್ಠ 9 ಮಂದಿ ಸಾವು: ನಗರದಾದ್ಯಂತ ಹೈ ಅಲರ್ಟ್

Krishnaveni K
ಸೋಮವಾರ, 10 ನವೆಂಬರ್ 2025 (20:52 IST)
Photo Credit: X
ದೆಹಲಿ: ಕೆಂಪುಕೋಟೆ ಬಳಿ ಇಂದು ಸಂಭವಿಸಿದ ಕಾರು ಸ್ಪೋಟದಲ್ಲಿ ಕನಿಷ್ಠ 9 ಮಂದಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ನಗರದಾದ್ಯಂತ ಈಗ ಹೈ ಅಲರ್ಟ್ ಘೋಷಿಸಲಾಗಿದೆ.

ಕೆಂಪುಕೋಟೆಯ ಮೆಟ್ರೋ ಸ್ಟೇಷನ್ ಗೇಟ್ 1 ರ ಬಳಿ ಸ್ಪೋಟ ಸಂಭವಿಸಿದೆ. ಸ್ಪೋಟದ ತೀವ್ರತೆಗೆ ಮೃತದೇಹಗಳು ಛಿದ್ರ ಛಿದ್ರವಾಗಿ ರಸ್ತೆಯಲ್ಲಿ ಬಿದ್ದಿದೆ. ಹಲವರು ಗಾಯಗೊಂಡಿದ್ದು ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳ ಬೆಂಕಿ ನಿಯಂತ್ರಣಕ್ಕೆ ತಂದಿದೆ. ಇದೀಗ ಘಟನೆಯಲ್ಲಿ ಎಷ್ಟು ಮಂದಿ ಸಾವನ್ನಪ್ಪಿದ್ದಾರೆ ಎಂಬ ಬಗ್ಗೆ ದೆಹಲಿ ಪೊಲೀಸ್ ಅಥವಾ ಅಧಿಕಾರಿಗಳಿಂದ ಅಧಿಕೃತ ಮಾಹಿತಿ ಇನ್ನಷ್ಟೇ ಬರಬೇಕಿದೆ.

ಸದ್ಯದ ಪರಿಸ್ಥಿತಿ ನೋಡಿದರೆ ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಈ ಸ್ಪೋಟದ ತೀವ್ರತೆ ಗಮನಿಸಿದರೆ ಭಾರೀ ಸ್ಪೋಟಕ ಬಳಸಿರುವುದು ಖಚಿತವಾಗುತ್ತದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Delhi blast: ದೆಹಲಿ ಕೆಂಪು ಕೋಟೆ ಬಳಿ ಕಾರು ಸ್ಪೋಟ: ಜನರಲ್ಲಿ ಆತಂಕ video

ತಮಿಳುನಾಡಿನ 14 ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ, ಕಾರಣ ಇಲ್ಲಿದೆ

ನಾಳೆ ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ

ಮತಗಳ್ಳತನದ ವಿರುದ್ಧ ಸಹಿ ಸಂಗ್ರಹಿಸಿ ಎಐಸಿಸಿಗೆ ಒಪ್ಪಿಸಿದ ಡಿಕೆ ಶಿವಕುಮಾರ್

ನನ್ನ ಹೆಸರಿನಲ್ಲಿ ನಕಲಿ ಸುದ್ದಿ ಪ್ರಕಟ ಮಾಡುವವರ ವಿರುದ್ಧ ಕಠಿಣ ಕ್ರಮ: ಸಿಟಿ ರವಿ

ಮುಂದಿನ ಸುದ್ದಿ
Show comments