Select Your Language

Notifications

webdunia
webdunia
webdunia
webdunia

ದೆಹಲಿ ಶೇಮ್: ಗನ್ ತೋರಿಸಿ ವಿದ್ಯಾರ್ಥಿನಿಯ ಮೇಲೆ ಐವರಿಂದ ಗ್ಯಾಂಗ್‌ರೇಪ್

ದೆಹಲಿ ಶೇಮ್: ಗನ್ ತೋರಿಸಿ ವಿದ್ಯಾರ್ಥಿನಿಯ ಮೇಲೆ ಐವರಿಂದ ಗ್ಯಾಂಗ್‌ರೇಪ್
ನವದೆಹಲಿ , ಮಂಗಳವಾರ, 29 ಜುಲೈ 2014 (15:51 IST)
ಆಘಾತಕಾರಿ ಘಟನೆಯೊಂದರಲ್ಲಿ 10ನೇ ಕ್ಲಾಸ್‌ ವಿದ್ಯಾರ್ಥಿನಿಯ ಮೇಲೆ ಐವರು ಕಾಮುಕರು ಗನ್ ಕೋರಿಸಿ ಅತ್ಯಾಚಾರವೆಸಗಿದ ಹೇಯ ಘಟನೆ ನಗರದ ಉತ್ತಮ ನಗರ ಪ್ರದೇಶದಲ್ಲಿ ವರದಿಯಾಗಿದೆ.
 
ವಿದ್ಯಾರ್ಥಿನಿ ಶಾಲೆಗೆ ತೆರಳುತ್ತಿದ್ದಾಗ ಆಕೆಯನ್ನು ಗನ್‌ನಿಂದ ಬೆದರಿಸಿದ ಆರೋಪಿಗಳು ಆಕೆಯ ಮೇಲೆ ಅತ್ಯಾಚಾರವೆಸಗಿದ್ದಲ್ಲದೇ ಅತ್ಯಾಚಾರದ ದೃಶ್ಯಗಳ ಎಂಎಂಎಸ್ ಕೂಡಾ ಮಾಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಐವರು ಆರೋಪಿಗಳಲ್ಲಿ ಇಬ್ಬರು ಆರೋಪಿಗಳು ಅಪ್ರಾಪ್ತರಾಗಿದ್ದು, ಒಬ್ಬ ಆರೋಪಿ ಆಕೆಗೆ ಪರಿಚಿತನಾಗಿದ್ದನು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 
ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದ್ದು, ಇನ್ನಿಬ್ಬರ ಆರೋಪಿಗಳ ಬಂಧನಕ್ಕೆ ಜಾಲ ಬೀಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Share this Story:

Follow Webdunia kannada