29 ವರ್ಷ ವಯಸ್ಸಿನ ಮಹಿಳೆಯ ಮೇಲೆ ಅತ್ಯಾಚಾರಗೈದ 70 ವರ್ಷ ವಯಸ್ಸಿನ ತಾಂತ್ರಿಕನನ್ನು ಪೊಲೀಸರು ಪಶ್ಚಿಮ ದೆಹಲಿಯ ನಿಹಾಲ್ ವಿಹಾರ್ ಪ್ರದೇಶದಲ್ಲಿ ಬಂಧಿಸಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಗೆ ಟಚ್ ಥೆರಪಿ ಮೂಲಕ ಗುಣಪಡಿಸುವುದಾಗಿ ನಂಬಿಸಿದ ತಾಂತ್ರಿಕ, ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಪೊಲಿಸ್ ಮೂಲಗಳು ತಿಳಿಸಿವೆ.
ಅತ್ಯಾಚಾರವೆಸಗಿರುವ ಬಗ್ಗೆ ಯಾರಿಗಾದರೂ ಮಾಹಿತಿ ನೀಡಿದಲ್ಲಿ ಬ್ಲ್ಯಾಕ್ ಮ್ಯಾಜಿಕ್ ಶಕ್ತಿಯಿಂದ ಕುಟುಂಬವನ್ನೇ ನಾಶಪಡಿಸುವುದಾಗಿ ತಾಂತ್ರಿಕ ಬೆದರಿಕೆಯೊಡ್ಡಿದ್ದ. ಆದಾಗ್ಯೂ ಮಹಿಳೆ, ನಿಹಾಲ್ ವಿಹಾರ್ ಪೊಲೀಸ್ ಠಾಣೆಯಲ್ಲಿ ಆರೋಪಿ ತಾಂತ್ರಿಕ ವಿರುದ್ಧ ದೂರು ನೀಡಿದ್ದಾಳೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಮಹಿಳೆಯ ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿ ತಾಂತ್ರಿಕನ ನಿವಾಸದ ಮೇಲೆ ದಾಳಿ ಮಾಡಿ ಅತನನ್ನು ಬಂಧಿಸಿಲಾಗಿದ್ದು, ಆಕೆಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ತಾಂತ್ರಿಕ ಕಪಿಲ್‌ದೇವ್ ನಿವಾಸದಲ್ಲಿ ವಿಜಿಟಿಂಗ್ ಕಾರ್ಡ್‌ಗಳು ಪತ್ತೆಯಾಗಿದ್ದು ಕಾರ್ಡ್‌ಗಳ ಮೇಲೆ ಆತನ ಹೆಸರು, ಫೋನ್ ನಂಬರ್, ಕ್ನಿನಿಕ್ ವಿಳಾಸವಿದೆ. ಬಡವರು ಮತ್ತು ಅನಕ್ಷರಸ್ಥ ಹೆಣ್ಣುಮಕ್ಕಳನ್ನು ಗುರಿಯಾಗಿಸುತ್ತಿದ್ದನು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ವೆಬ್‌ದುನಿಯಾ
ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.