ನವದೆಹಲಿ: ಇತ್ತೀಚೆಗೆ ನಡೆದ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿ ಅಧಿಕಾರಕ್ಕೇರುತ್ತಿರುವ ಬಿಜೆಪಿ ಮಹಿಳೆಯರನ್ನೇ ಮುಖ್ಯಮಂತ್ರಿ ಮಾಡಲು ಹೊರಟಿದೆ ಎಂದು ವರದಿಯಾಗುತ್ತಿದೆ.
ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಹಲವರು ರೇಸ್ ನಲ್ಲಿದ್ದಾರೆ. ಆದರೆ ಪ್ರಧಾನಿ ಮೋದಿ ವಿದೇಶ ಪ್ರವಾಸ ಮುಗಿಸಿ ಬಂದ ಮೇಲೆಯೇ ಅಧಿಕೃತವಾಗಿ ಮುಖ್ಯಮಂತ್ರಿ ಘೋಷಣೆ ಮಾಡಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿದೆ. ಅದಕ್ಕಿಂತ ಮೊದಲು ಯಾರೂ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ಎಚ್ಚರಿಕೆ ನೀಡಲಾಗಿದೆ.
ನಿನ್ನೆಯಿಡೀ ಮುಖ್ಯಮಂತ್ರಿ ಹುದ್ದೆಗೆ ಪರ್ವೇಶ್ ವರ್ಮ, ವಿಜೇಂದರ್ ಗುಪ್ತಾ, ಕಪಿಲ್ ಮಿಶ್ರಾ ಮುಂತಾದವರ ಹೆಸರುಗಳು ಕೇಳಿಬರುತ್ತಿದ್ದವು. ಆದರೆ ಇದೀಗ ಮಹಿಳಾ ಅಭ್ಯರ್ಥಿಗಳು ಮುಖ್ಯಮಂತ್ರಿಗಳಾಗುವ ಸಾಧ್ಯತೆಯಿದೆ ಎಂಬ ಮಾತು ಕೇಳಿಬರುತ್ತಿದೆ.
ಅದರಂತೆ ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ, ಸುಷ್ಮಾ ಸ್ವರಾಜ್ ಪುತ್ರಿ ಭಾನ್ಸುರಿ ಸ್ವರಾಜ್, ಪೂನಮ್ ಶರ್ಮ, ಶಿಖಾ ರಾಯ್, ನೀಲಮ್ ಪೆಹ್ಲವಾನ್ ಹೆಸರುಗಳು ಕೇಳಿಬರುತ್ತಿವೆ. ಬಿಜೆಪಿ ಅಧಿಕೃತವಾಗಿ ಘೋಷಣೆ ಮಾಡುವವರೆಗೆ ಸಸ್ಪೆನ್ಸ್ ಆಗಿರಲಿದೆ.