Select Your Language

Notifications

webdunia
webdunia
webdunia
webdunia

ಸಾರ್ವಜನಿಕ ಸ್ಥಳಗಳಲ್ಲಿರುವ ಧಾರ್ಮಿಕ ಕೇಂದ್ರಗಳ ನೆಲಸಮ: ಸುಪ್ರೀಂ ಕೋರ್ಟ್ ಆದೇಶ

Supreme Court

Sampriya

ನವದೆಹಲಿ , ಮಂಗಳವಾರ, 1 ಅಕ್ಟೋಬರ್ 2024 (14:29 IST)
Photo Courtesy X
ನವದೆಹಲಿ: ಸಾರ್ವಜನಿಕ ಸ್ಥಳಗಳಲ್ಲಿರುವ ಆಸ್ತಿ ಧ್ವಂಸ ವಿಚಾರದಲ್ಲಿ ಯಾವುದೇ ನಿರ್ದಿಷ್ಟ ಸಮುದಾಯಕ್ಕೆ ಮೀಸಲಾಗಿರದೆ, ಎಲ್ಲಾ ಧರ್ಮದ ನಾಗರಿಕರಿಗೆ ಅನ್ವಯವಾಗುವ ಮಾರ್ಗಸೂಚಿ ರೂಪಿಸುವುದಾಗಿ ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.

ಒಂದು ನಿರ್ದಿಷ್ಟ ಧರ್ಮಕ್ಕೆ ವಿಭಿನ್ನ ಕಾನೂನು ಇರಬಾರದು ಎಂದು ಗಮನಿಸಿದ ನ್ಯಾಯಪೀಠ, ಸಾರ್ವಜನಿಕ ರಸ್ತೆಗಳು, ಸರ್ಕಾರಿ ಭೂಮಿ ಅಥವಾ ಅರಣ್ಯಗಳಲ್ಲಿ ಯಾವುದೇ ಅನಧಿಕೃತ ನಿರ್ಮಾಣಗಳು ತಲೆಯೆತ್ತುವಂತಿಲ್ಲ ಮತ್ತು ಅವುಗಳನ್ನು ರಕ್ಷಿಸಲೂಬಾರದು ಎಂದು ಹೇಳಿದೆ.

ನಮ್ಮದು ಜಾತ್ಯತೀತ ರಾಷ್ಟ್ರ. ಇಲ್ಲಿ ನ್ಯಾಯಾಲಯ ಹೊರಡಿಸುವ ಆದೇಶ ಎಲ್ಲಾ ನಾಗರಿಕರಿಗೂ, ಸಂಸ್ಥೆಗಳಿಗೂ ಅನ್ವಯವಾಗುತ್ತವೆ ಹೊರತು ನಿರ್ದಿಷ್ಟ ಸಮುದಾಯಕ್ಕೆ ಅಲ್ಲ ಎಂದು ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಕೆ.ವಿ. ವಿಶ್ವನಾಥನ್ ಅವರನ್ನೊಳಗೊಂಡ ನ್ಯಾಯಪೀಠ ಹೇಳಿದೆ.

ಸಾರ್ವಜನಿಕ ಸುರಕ್ಷತೆಯು ಅತ್ಯುನ್ನತವಾಗಿದೆ. ರಸ್ತೆ, ಜಲಮೂಲಗಳು ಅಥವಾ ರೈಲು ಹಳಿಗಳನ್ನು ಅತಿಕ್ರಮಿಸುವ ಯಾವುದೇ ಧಾರ್ಮಿಕ ರಚನೆಯನ್ನು ಸುಮ್ಮನೆ ಬಿಡಬಾರದು, ಕೆಡವಿ ಹಾಕಬೇಕು ಎಂದು ಸುಪ್ರೀಂ ಕೋರ್ಟ್ ಮಹತ್ತರ ಆದೇಶ ನೀಡಿದೆ.

ಬುಲ್ಡೋಜರ್ ಕಾರ್ಯಾಚರಣೆ ಮತ್ತು ಅತಿಕ್ರಮಣ ವಿರೋಧಿ ಕಾರ್ಯಾಚರಣೆಗಳಿಗೆ ಕೋರ್ಟ್ ನಿರ್ದೇಶನಗಳು ಧರ್ಮವನ್ನು ಲೆಕ್ಕಿಸದೆ ಎಲ್ಲಾ ನಾಗರಿಕರಿಗೆ ಅನ್ವಯಿಸುತ್ತದೆ ಎಂದು ನ್ಯಾಯಾಲಯ ಹೇಳಿದೆ. ನಮ್ಮ ಆದೇಶವು ಯಾವುದೇ ಸಾರ್ವಜನಿಕ ಸ್ಥಳಗಳನ್ನು ಅತಿಕ್ರಮಣದಾರರಿಗೆ ಸಹಾಯ ಮಾಡದಂತೆ ನೋಡಿಕೊಳ್ಳುವುದಾಗಿದೆ ಎಂದು ನ್ಯಾಯಪೀಠ ಹೇಳಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮುಡಾ ಹಗರಣ: ಬಲವಂತದಿಂದ ಸಿದ್ದರಾಮಯ್ಯ ಕೈಯಲ್ಲಿ ಪತ್ರ ಬರೆಸಿರಬಹುದು, ಬಿಜೆಪಿ ಹೊಸ ಬಾಂಬ್