Publish Date: Sun, 17 Oct 2021 (16:50 IST)
Updated Date: Sun, 17 Oct 2021 (16:52 IST)
ನವದೆಹಲಿ : ಅನಾರೋಗ್ಯದ ಕಾರಣ ಬುಧವಾರ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಡೆಂಘೆ ಇರುವುದು ಪತ್ತೆಯಾಗಿದೆ ಎಂದು ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಏಮ್ಸ್) ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಅವರ ಆರೋಗ್ಯ ಸುಧಾರಿಸುತ್ತಿದೆ ಎಂದೂ ಹೇಳಿದ್ದಾರೆ. ಜ್ವರ ಮತ್ತು ಬಳಲಿಕೆಯಿಂದ ಆಸ್ಪತ್ರೆಗೆ ಸೇರಿದ್ದ ಹಿರಿಯ ಕಾಂಗ್ರೆಸ್ ನಾಯಕ ಸಿಂಗ್ರಲ್ಲಿ ಪ್ಲೇಟ್ಲೆಟ್ ಜಾಸ್ತಿಯಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಡಾ. ನಿತೀಶ್ ನಾಯ್ಕ್ ನೇತೃತ್ವದ ಹೃದ್ರೋಗ ತಜ್ಞರ ತಂಡವೊಂದು ಮಾಜಿ ಪ್ರಧಾನಿಯ ಆರೋಗ್ಯದ ಮೇಲ್ವಿಚಾರಣೆ ನಡೆಸುತ್ತಿದೆ.