Webdunia - Bharat's app for daily news and videos

Install App

ಸ್ವಿಸ್‌ ಬ್ಯಾಂಕ್‌ನಲ್ಲಿ ಭಾರತೀಯರ ಠೇವಣಿ 11% ಇಳಿಕೆ

Webdunia
ಭಾನುವಾರ, 25 ಜೂನ್ 2023 (08:43 IST)
ನವದೆಹಲಿ : ಸ್ವಿಜರ್ಲೆಂಡ್ನಲ್ಲಿರುವ ಸ್ವಿಸ್ ಬ್ಯಾಂಕ್ನಲ್ಲಿ ಭಾರತೀಯರ ಭಾರತೀಯರ ಹೂಡಿಕೆ, ಡಿಪಾಸಿಟ್ ಪ್ರಮಾಣ ಇಳಿಕೆಯಾಗಿದೆ.
 
2021ಕ್ಕೆ ಹೋಲಿಸಿದರೆ 11% ರಷ್ಟು ಕುಸಿತ ಕಂಡಿದ್ದು, ಪ್ರಸ್ತುತ 3.42 ಶತಕೋಟಿ ಫ್ರಾಂಕ್ (ಅಂದಾಜು 30 ಸಾವಿರ ಕೋಟಿ ರೂ.) ಇಳಿಕೆಯಾಗಿದೆ ಎಂದು ಸ್ವಿಸ್ ಕೇಂದ್ರೀಯ ಬ್ಯಾಂಕ್ನ ವಾರ್ಷಿಕ ದತ್ತಾಂಶ ವರದಿ ತಿಳಿಸಿದೆ.

2021ರಲ್ಲಿ ಭಾರತೀಯರು, ಭಾರತ ಮೂಲದ ಬ್ಯಾಂಚ್ಗಳು ಮತ್ತು ಹಣಕಾಸು ಸಂಸ್ಥೆಗಳ ಒಟ್ಟು ಬಂಡವಾಳ 35 ಸಾವಿರ ಕೋಟಿ ರೂ.ಗೆ ಏರಿಕೆಯಾಗಿತ್ತು. ಇದು 14 ವರ್ಷಗಳಲ್ಲೇ ಗರಿಷ್ಠ ಬಂಡವಾಳ ಸಂಗ್ರಹ ಎನಿಸಿಕೊಂಡಿತ್ತು. ಬಂಡವಾಳ ಕಡಿಮೆಯಾದ ಹಿನ್ನೆಲೆಯಲ್ಲಿ ಕಳೆದ ವರ್ಷ 44ನೇ ಸ್ಥಾನದಲ್ಲಿ ಭಾರತ ಈ ಬಾರಿ 46ನೇ ಸ್ಥಾನ ಪಡೆದಿದೆ.

 
2006ರಲ್ಲಿ ಸಾರ್ವಕಾಲಿಕ ಗರಿಷ್ಟ 60 ಸಾವಿರ ಕೋಟಿ ರೂ. ಹೂಡಿಕೆಗೆ ಏರಿಕೆಯಾಗಿತ್ತು. 2011, 2013, 2017, 2020, 2021ರಲ್ಲಿ ಬಂಡವಾಳ ಏರಿಕೆಯಾಗಿತ್ತು. 2020ರಲ್ಲಿ ಸ್ವಿಸ್ಬ್ಯಾಂಕ್ನಲ್ಲಿ ಭಾರತೀಯರ ಸಂಪತ್ತು 20,700 ಕೋಟಿ ರೂ. ಗಳಷ್ಟಿತ್ತು. 

ಸ್ವಯಂಚಾಲಿತ ಮಾಹಿತಿ ವಿನಿಮಯ ಚೌಕಟ್ಟಿನ ಅಡಿಯಲ್ಲಿ ಭಾರತವು ಸ್ವಿಸ್ ಬ್ಯಾಂಕ್ ಖಾತೆಗಳ ವಿವರಗಳ ನಾಲ್ಕನೇ ಪಟ್ಟಿಯನ್ನು 2022ರ ಅಕ್ಟೋಬರ್ನಲ್ಲಿ ಪಡೆದಿತ್ತು. ಈ ವರ್ಷದ ಸೆಪ್ಟೆಂಬರ್ನಲ್ಲಿ ಐದನೇ ಪಟ್ಟಿ ಕೇಂದ್ರ ಸರ್ಕಾರದ ಕೈ ಸೇರುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರೇಯಸಿ ಫೋನ್ ಸ್ವೀಕರಿಸಲಿಲ್ಲ ಎಂದು ಲೈಟ್ ಕಂಬ ಏರಿ ಕುಳಿತ: ಮುಂದಾಗಿದ್ದೇನು ನೋಡಿ Video

ಪಾಕಿಸ್ತಾನಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮೋದಿ ಗೂಂಡಾ ಎಂದು ರಾಜ್ ಕೋಟ್ ಯುವತಿಯ ನಿಂದನೆ Video

Video: ಅಪ್ರಾಪ್ತ ಬಾಲಕಿಯನ್ನು ಶೌಚಾಲಯಕ್ಕೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ ಪಾಪಿಗೆ ಸಿಕ್ತು ತಕ್ಕ ಶಾಸ್ತಿ

ಇಂಥಾ ಸ್ವಾರ್ಥಿ ಮಕ್ಕಳು ಇದ್ದರೆಷ್ಟು...ತಂದೆಯ ಅಂತ್ಯಕ್ರಿಯೆ ಆನ್ ಲೈನ್ ವೀಕ್ಷಿಸಿ ಜುಜುಬಿ ದುಡ್ಡು ಕೊಟ್ಟು ಕೈತೊಳೆದುಕೊಂಡ್ರು Video

ನಿಜಕ್ಕೂ ಈ ಹಸುವಿನದ್ದು ಗಟ್ಟಿ ಜೀವವೇ... ಯಾಕೆ ಅಂತೀರಾ ಈ ವಿಡಿಯೋ ತಪ್ಪದೇ ನೋಡಿ Video

ಮುಂದಿನ ಸುದ್ದಿ
Show comments