Publish Date: Tue, 26 Sep 2017 (08:56 IST)
Updated Date: Tue, 26 Sep 2017 (08:58 IST)
ನವದೆಹಲಿ: ಅತ್ಯಾಚಾರ ಆರೋಪದಲ್ಲಿ ರೋಹ್ಟಗಿ ಜೈಲಿನಲ್ಲಿ 20 ವರ್ಷ ಜೈಲು ಶಿಕ್ಷೆಗೊಳಗಾಗಿರುವ ಡೇರಾ ಸಚ್ ಮುಖ್ಯಸ್ಥ ಬಾಬಾ ರಾಮ್ ರಹೀಂ ಸಿಂಗ್ ತನ್ನ ವಿರುದ್ಧದ ಸಿಬಿಐ ಕೋರ್ಟ್ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದಾನೆ.
ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ನಲ್ಲಿ ಸಿಬಿಐ ವಿಶೇಷ ಕೋರ್ಟ್ ನೀಡಿದ ತೀರ್ಪು ಪ್ರಶ್ನಿಸಿ ಡೇರಾ ಬಾಬಾ ಮೇಲ್ಮನವಿ ಸಲ್ಲಿಸಿದ್ದಾನೆ. ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಡೇರಾ ಬಾಬಾನಿಗೆ ತಲಾ 10 ವರ್ಷದಂತೆ 20 ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು.
ಘಟನೆ ಬಗ್ಗೆ ಸಂತ್ರಸ್ತರ ಹೇಳಿಕೆ ದಾಖಲಿಸಲು ಸಿಬಿಐ 6 ವರ್ಷ ತೆಗೆದುಕೊಂಡಿತು ಎಂಬುದನ್ನೇ ಮುಂದಿಟ್ಟುಕೊಂಡು ಮೇಲ್ಮನವಿ ಸಲ್ಲಿಸಲಾಗಿದೆ ಎಂದು ಬಾಬಾ ಪರ ವಕೀಲರು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ