Webdunia - Bharat's app for daily news and videos

Install App

ಮಹಾರಾಷ್ಟ್ರದ ನೂತನ ಸಿಎಂ ಆಗಿ ದೇವೇಂದ್ರ ಫಡಣವೀಸ್‌: ನಾಳೆಯೇ ಪ್ರಮಾಣ ವಚನ

Sampriya
ಬುಧವಾರ, 4 ಡಿಸೆಂಬರ್ 2024 (14:14 IST)
Photo Courtesy X
 ಮುಂಬೈ: ಮುಂಬೈನಲ್ಲಿ ಇಂದು ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ದೇವೇಂದ್ರ ಫಡಣವೀಸ್‌ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡಣವೀಸ್‌ ಅವರು ಗುರುವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಗುರುವಾರ ಸಂಜೆ 5.30ಕ್ಕೆ ಪ್ರಮಾಣ ವಚನ ಸಮಾರಂಭ ನಡೆಯಲಿದ್ದು, ಆಜಾದ್‌ ಮೈದಾನದಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ.

ಮೈತ್ರಿಪಕ್ಷವಾದ ಶಿವಸೇನೆ ಪಕ್ಷದ ಏಕನಾಥ ಶಿಂದೆ ಮತ್ತು ಎನ್‌ಸಿಪಿ ಪಕ್ಷದ ಅಜಿತ್‌ ಪವಾರ್‌ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ.‌‌

ಮುಖ್ಯಮಂತ್ರಿ ಸ್ಥಾನಕ್ಕೆ ಬಿಜೆಪಿಯ ದೇವೇಂದ್ರ ಫಡಣವೀಸ್‌ ಹೆಸರು ಮುಂಚೂಣಿಯಲ್ಲಿದ್ದ ಕಾರಣ ಮಹಾರಾಷ್ಟ್ರದ ಹಂಗಾಮಿ ಮುಖ್ಯಮಂತ್ರಿ ಹಾಗೂ ಶಿವಸೇನಾ (ಶಿಂದೆ ಬಣ) ಮುಖ್ಯಸ್ಥ ಏಕನಾಥ ಶಿಂದೆ ಅವರು ನೂತನ ಮಹಾಯುತಿ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿ ಹುದ್ದೆಯನ್ನು ಒಪ್ಪಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇತ್ತ ಎನ್‌ಸಿಪಿ ಮುಖ್ಯಸ್ಥ ಅಜಿತ್ ಪವಾರ್‌ ಅವರು ಸೋಮವಾರ ಮತ್ತು ಮಂಗಳವಾರ ನವದೆಹಲಿಯಲ್ಲಿದ್ದುಕೊಂಡು, ಬಿಜೆಪಿ ವರಿಷ್ಠರ ಜತೆ ಮಾತುಕತೆ ನಡೆಸಿದ್ದಾರೆ. ನೂತನ ಸರ್ಕಾರದಲ್ಲಿ ಪ್ರಮುಖ ಖಾತೆಗಳನ್ನು ಪಡೆಯಲು ಎನ್‌ಸಿಪಿ ಮತ್ತು ಶಿವಸೇನಾ ತೀವ್ರ ಕಸರತ್ತು ನಡೆಸಿವೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದಿನಿಂದ ಹವಾಮಾನದ ಈ ಬದಲಾವಣೆಯನ್ನು ತಪ್ಪದೇ ಗಮನಿಸಿ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments