Select Your Language

Notifications

webdunia
webdunia
webdunia
webdunia

ಮಹಾರಾಷ್ಟ್ರ ನೂತನ ಸಿಎಂ ಫಡಣವೀಸ್ ಪ್ರಮಾಣವಚನಕ್ಕೆ ಬಾಲಿವುಡ್ ಸೆಲೆಬ್ರಿಟಿಸ್ ದಂಡು

Maharashtra Chief Minister Devendra Fadnavis, Prime Minister Narendra Modi, Actor ShahRukh Khan

Sampriya

ಮುಂಬೈ , ಗುರುವಾರ, 5 ಡಿಸೆಂಬರ್ 2024 (18:24 IST)
Photo Courtesy X
ಮುಂಬೈ: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ದೇವೇಂದ್ರ ಫಡಣವೀಸ್‌ ಅವರು ಪ್ರಮಾಣವಚನ ಸ್ವಿಕರಿಸಿದರು. ಬಿಜೆಪಿಯ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿ ಸುಮಾರು ಎರಡು ವಾರಗಳ ನಂತರ ಮಹಾರಾಷ್ಟ್ರ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಅವರು ಪ್ರಮಾಣವಚನ ಸ್ವೀಕರಿಸಿದರು.

ಇಂದು ಸಂಜೆ 5-30ಕ್ಕೆ ದಕ್ಷಿಣ ಮುಂಬೈನ ಆಜಾದ್ ಮೈದಾನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ರಾಜ್ಯಪಾಲ ಸಿ ಪಿ ರಾಧಾಕೃಷ್ಣನ್ ಅವರು ದೇವೇಂದ್ರ ಫಡ್ನವಿಸ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಎನ್‌ಡಿಎ ಆಡಳಿತವಿರುವ ರಾಜ್ಯಗಳ ಸಿಎಂಗಳು ಹಾಗೂ ಉಪ ಮುಖ್ಯಮಂತ್ರಿಗಳು, ಕೇಂದ್ರ ಸಚಿವರು, ಎನ್‌ಡಿಎ ನಾಯಕರು ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು.

ಅದಲ್ಲದೆ ಬಾಲಿವುಡ್‌ ನಟರಾದ ಶಾರುಖ್ ಖಾನ್, ಸಲ್ಮಾನ್ ಖಾನ್, ರಣಬೀರ್ ಕಪೂರ್ ಮತ್ತು ರಣವೀರ್ ಸಿಂಗ್, ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್, ಕೈಗಾರಿಕೋದ್ಯಮಿಗಳಾದ ಮುಖೇಶ್ ಅಂಬಾನಿ ಮತ್ತು ಗೌತಮ್ ಅದಾನಿ ಸೇರಿದಂತೆ ಪ್ರಮುಖ ಸೆಲೆಬ್ರಿಟಿಗಳು ಸಹ ಸಮಾರಂಭದಲ್ಲಿ ಉಪಸ್ಥಿತರಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಕೇರಳದ ಲಾಬಿಗೆ ಮಣಿದು ಸಿಎಂ, ಡಿಸಿಎಂ ನಂದಿನಿಯನ್ನು ಹಾಳು ಮಾಡುತ್ತಿದ್ದಾರೆ: ವಿಜಯೇಂದ್ರ ಕಿಡಿ