ಬ್ರಿಡ್ಜ್ ಉದ್ಘಾಟನೆಗೂ ಮುನ್ನ ಢಮಾರ್!

Webdunia
ಸೋಮವಾರ, 19 ಡಿಸೆಂಬರ್ 2022 (12:12 IST)
ಪಾಟ್ನಾ : ಬಿಹಾರದ ಬೇಗುಸರಾಯ್ನಲ್ಲಿ ಗಂಡಕ್ ನದಿ ದಾಟಲು 13 ಕೋಟಿ ರೂ. ಖರ್ಚು ಮಾಡಿ ಕಟ್ಟಲಾಗಿದ್ದ 206 ಮೀಟರ್ ಉದ್ದದ ಬ್ರಿಡ್ಜ್ ಉದ್ಘಾಟನೆಗೂ ಮುನ್ನ ಕುಸಿದು ಬಿದ್ದಿದೆ.

ಭಾನುವಾರ ಬೆಳಗ್ಗೆ ಬಿಹಾರದ ಬೇಗುಸರಾಯ್ನಲ್ಲಿ ಗಂಡಕ್ ನದಿ ಬಳಿ ನಿರ್ಮಿಸಲಾಗಿದ್ದ ಬ್ರಿಡ್ಜ್ ಮುಂಭಾಗ ಕುಸಿದು ನದಿ ಪಾಲಾಗಿದೆ.

2016ರಲ್ಲಿ ಮುಖ್ಯಮಂತ್ರಿ ನರ್ಬಾಡ್ ಯೋಜನೆಯಡಿಯಲ್ಲಿ ಈ ಬ್ರಿಡ್ಜ್ ನಿರ್ಮಾಣ ಕಾರ್ಯ ಆರಂಭವಾಗಿತ್ತು. ಆ ಬಳಿಕ 2017ರಲ್ಲಿ ಕಾಮಗಾರಿ ಪೂರ್ಣಗೊಂಡಿತ್ತು. ಆದರೆ ಉದ್ಘಾಟನೆಗೊಂಡಿರಲಿಲ್ಲ. ಆ ಬಳಿಕ ಕೆಲದಿನಗಳ ಹಿಂದೆ ಸೇತುವೆಯ ಮೇಲ್ಭಾಗದಲ್ಲಿ ಬಿರುಕು ಕಾಣಿಸಿಕೊಂಡಿತ್ತು. ಇಂದು ಬೆಳಗ್ಗೆ ಕುಸಿದು ಬಿದ್ದಿದೆ. 

ಸಾಹೇಬ್ಪುರ ಕಮಲ್ ಪೊಲೀಸ್ ಠಾಣೆ ವ್ಯಾಪ್ತಿಯ ಅಹೋಕ್ ಗಂಡಕ್ ಘಾಟ್ ಕಡೆಯಿಂದ ಆಕೃತಿ ತೋಲಾ ಚೌಕಿ ಮತ್ತು ಬಿಶನ್ಪುರ ನಡುವೆ ಸಂಪರ್ಕ ಕಲ್ಪಿಸಲು 206 ಮೀಟರ್ ಸೇತುವೆಯನ್ನು ನಿರ್ಮಿಸಲಾಗಿತ್ತು. ಆದರೆ ಇದೀಗ ಉದ್ಘಾಟನೆಗೂ ಮುನ್ನ ಕುಸಿದು ಬಿದ್ದ ಪರಿಣಾಮ ದುರಂತವೊಂದು ತಪ್ಪಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಗೆಲ್ಲುತ್ತಿದ್ದಂತೇ ಕಾರ್ಯಕರ್ತರಿಗೆ ಮುಂದಿನ ನಾಲ್ಕು ಟಾರ್ಗೆಟ್ ನೀಡಿದ ಪ್ರಧಾನಿ ಮೋದಿ

ಸಾಲುಮರದ ತಿಮ್ಮಕ್ಕನ ಕೊನೆಯ ಆಸೆ ಈಡೇರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments