Select Your Language

Notifications

webdunia
webdunia
webdunia
webdunia

ಮುಂದಿನ ವರ್ಷದಿಂದ ನೀಟ್ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ

Dharmendra Pradhan
Photo Credit: X
ನವದೆಹಲಿ: ಈ ವರ್ಷ ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ ನೀಟ್ ಪರೀಕ್ಷೆ ಗೊಂದಲದ ಗೂಡಾಗಿದೆ. ಇದರ ಬೆನ್ನಲ್ಲೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮುಂದಿನ ವರ್ಷದಿಂದ ನೀಟ್ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ ಪ್ರಕಟಿಸಿದ್ದಾರೆ.

ನೀಟ್ ಪರೀಕ್ಷೆಯಲ್ಲಿ ಅಕ್ರಮವಾಗಿದ್ದರಿಂದ ಮೇ 3 ರಂದು ನಡೆದಿದ್ದ ಪರೀಕ್ಷೆ ರದ್ದಾಗಿತ್ತು. ಇದೀಗ ಹೊಸದಾಗಿ ಜೂನ್ 21 ರಂದು ನೀಟ್ ಮರು ಪರೀಕ್ಷೆ ನಡೆಸುವುದಾಗಿ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಘೋಷಿಸಿದೆ.

ಆದರೆ ಒಮ್ಮೆ ಪರೀಕ್ಷೆ ಬರೆದು ನಿರಾಳರಾಗಿದ್ದ ವಿದ್ಯಾರ್ಥಿಗಳು ಇದರಿಂದ ಸಂಕಷ್ಟಕ್ಕೀಡಾಗಿದ್ದಾರೆ. ಮತ್ತೆ ಶುರುವಿನಿಂದ ಪರೀಕ್ಷೆ ಎದುರಿಸಬೇಕು ಎನ್ನುವ ಸಂಕಟ ವಿದ್ಯಾರ್ಥಿಗಳದ್ದು. ಇದರ ನಡುವೆ ಮುಂದಿನ ವರ್ಷದಿಂದ ಪರೀಕ್ಷಾ ಅಕ್ರಮ ತಡೆಯುವ ನಿಟ್ಟಿನಲ್ಲಿ ಪರೀಕ್ಷೆಯ ಮಾದರಿಯನ್ನೇ ಬದಲಾಯಿಸಲು ಸರ್ಕಾರ ನಿರ್ಧರಿಸಿದೆ.

ಅದರಂತೆ ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ ನೀಟ್ ಪರೀಕ್ಷೆ ನಡೆಸುವುದಾಗಿ ಸಚಿವ ಧರ್ಮೇಂದ್ರ ಪ್ರಧಾನ್ ಘೋಷಿಸಿದ್ದಾರೆ. ಪರೀಕ್ಷೆ ಮಾಫಿಯಾ ವಿರುದ್ಧ ನಾವು ಹೋರಾಡಲಿದ್ದೇವೆ. ಇದರ ಜವಾಬ್ಧಾರಿಯನ್ನು ನಾವು ತೆಗೆದುಕೊಳ್ಳುತ್ತೇವೆ. ಸಚಿವಾಲಯ ಇದನ್ನು ಸರಿಪಡಿಸಲಿದೆ ಎಂದು ಅವರು ಹೇಳಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ