Publish Date: Thu, 28 Sep 2017 (06:39 IST)
Updated Date: Thu, 28 Sep 2017 (06:41 IST)
ನವದೆಹಲಿ: ಭಾರತೀಯ ಸೇನೆ ಮತ್ತೊಂದು ಸರ್ಜಿಕಲ್ ಸ್ಟ್ರೈಕ್ ನಡೆಸಿದೆ ಎಂಬ ಮಾತುಗಳು ಕೇಳಿ ಬಂದಿತ್ತು. ಆದರೆ ಇದು ನಿಜವೇ? ನಿಜವಾಗಿ ನಡೆದಿದ್ದೇನು?
ಭಾರತ ಮತ್ತು ಮ್ಯಾನ್ಮಾರ್ ಗಡಿಯಲ್ಲಿ ಭಾರತೀಯ ಸೇನೆ ಉಗ್ರರ ವಿರುದ್ಧ ಬೃಹತ್ ಕಾರ್ಯಾಚರಣೆ ನಡೆಸಿತ್ತು. ಸುಮಾರು 70 ಕಮಾಂಡೋಗಳು ಗಡಿಯಲ್ಲಿ ಬುಧವಾರ ಮುಂಜಾನೆ ಹಲವು ಉಗ್ರರನ್ನು ಹೊಡೆದುರುಳಿಸಿದ್ದರು.
ಈ ಹಿನ್ನಲೆಯಲ್ಲಿ ಇದನ್ನು ಮತ್ತೊಂದು ಸರ್ಜಿಕಲ್ ಸ್ಟ್ರೈಕ್ ಎಂದೇ ಹೇಳಲಾಗಿತ್ತು. ಆದರೆ ಭಾರತೀಯ ಸೇನೆ ಇದನ್ನು ಸರ್ಜಿಕಲ್ ಸ್ಟ್ರೈಕ್ ಅಲ್ಲ ಎಂದಿದೆ. ನಾವು ಅಂತಾರಾಷ್ಟ್ರೀಯ ಗಡಿ ಉಲ್ಲಂಘಿಸಿಲ್ಲ ಎಂದು ಸೇನೆ ಸ್ಪಷ್ಟಪಡಿಸಿದೆ. ಬಂಡುಕೋರರ ಮೇಲೆ ನಮ್ಮ ಸೇನೆ ದಾಳಿ ನಡೆಸಿದೆ ಅಷ್ಟೇ ಎಂದು ಸೇನಾ ಮೂಲಗಳು ಹೇಳಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ