Select Your Language

Notifications

webdunia
webdunia
webdunia
webdunia

ಮೋದಿ ಸರ್ಕಾರ ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂತು ಎಂದು ಸಚಿವ ನಿತಿನ್ ಗಡ್ಕರಿ ಹೇಳಿದ್ದ ವಿಡಿಯೋ ನಿಜವೇ?

ಮೋದಿ ಸರ್ಕಾರ ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂತು ಎಂದು ಸಚಿವ ನಿತಿನ್ ಗಡ್ಕರಿ ಹೇಳಿದ್ದ ವಿಡಿಯೋ ನಿಜವೇ?
ನವದೆಹಲಿ , ಮಂಗಳವಾರ, 9 ಅಕ್ಟೋಬರ್ 2018 (10:08 IST)
ನವದೆಹಲಿ: ಮೋದಿ ಸರ್ಕಾರ ಕಳೆದ ಬಾರಿ ಲೋಕಸಭೆ ಚುನಾವಣೆಯಲ್ಲಿ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂತು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆನ್ನಲಾದ ವಿಡಿಯೋ ಒಂದನ್ನು ಕಾಂಗ್ರೆಸ್ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದೆ.

ನಟ ನಾನಾ ಪಾಟೇಕರ್ ನಿರೂಪಿಸಿದ ಮಾತುಕತೆಯೊಂದರಲ್ಲಿ ನಿತಿನ್ ಗಡ್ಕರಿ ‘ಕಳೆದ ಚುನಾವಣೆಯಲ್ಲಿ ನಮಗೆ ಅಧಿಕಾರ ಸಿಗುವುದು ಕಷ್ಟ ಎಂದು ಗೊತ್ತಾಗಿತ್ತು. ಹೀಗಾಗಿ ನಮ್ಮವರೇ ಸುಳ್ಳು ಆಶ್ವಾಸನೆಗಳನ್ನು ಕೊಡಲು ಸಲಹೆ ನೀಡಿದರು. ಅದರಂತೆ ನಾವು ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದೆವು. ಈಗ ಜನರು ಅದನ್ನು ನಮಗೆ ನೆನಪಿಸುತ್ತಿದ್ದಾರೆ. ಆದರೆ ನಮಗೆ ಅದನ್ನು ಪೂರೈಸಲು ಸಾಧ್ಯವಿಲ್ಲದ ಕಾರಣ ನಕ್ಕು ಮುಂದೆ ಹೋಗುತ್ತಿದ್ದೇವೆ’ ಎಂದು ಕಾಂಗ್ರೆಸ್ ಪ್ರಕಟಿಸಿರುವ ವಿಡಿಯೋದಲ್ಲಿ ಗಡ್ಕರಿ ಹೇಳುತ್ತಾರೆ.

ಆದರೆ ಇದರ ನಿಜಾಂಶ ತಿಳಿದುಬಂದಿಲ್ಲ. ಹಾಗಿದ್ದರೂ ಕಾಂಗ್ರೆಸ್ ಈ ವಿಡಿಯೋ ಹರಿಯಬಿಟ್ಟು ಕೇಂದ್ರ ಸಚಿವರೇ ಸತ್ಯ ಒಪ್ಪಿಕೊಂಡಿದ್ದಾರೆ ಎಂದು ಲೇವಡಿ ಮಾಡುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

Share this Story:

Follow Webdunia kannada

ಮುಂದಿನ ಸುದ್ದಿ

ಮಂಡ್ಯ ಲೋಕಸಭೆ ಕ್ಷೇತ್ರದ ಟಿಕೆಟ್ ಗಾಗಿ ಜೆಡಿಎಸ್ ನಲ್ಲೇ ಪೈಪೋಟಿ