Webdunia - Bharat's app for daily news and videos

Install App

ಪಾಸ್ ಪೋರ್ಟ್ ಗಾಗಿ ಅರ್ಜಿ ಸಲ್ಲಿಸಿದ್ದರೆ ಈ ಸೂಚನೆ ಗಮನಿಸಿ

Krishnaveni K
ಗುರುವಾರ, 29 ಆಗಸ್ಟ್ 2024 (15:27 IST)
ಬೆಂಗಳೂರು: ಪಾಸ್ ಪೋರ್ಟ್ ಗಾಗಿ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿದ್ದೀರಾ ಹಾಗಿದ್ದರೆ ಕೇಂದ್ರ ಸರ್ಕಾರದ ಈ ಒಂದು ಸೂಚನೆಯನ್ನು ಗಮನಿಸಿ. ಇನ್ನು ಐದು ದಿನಗಳ ಕಾಲ ನಿಮ್ಮ ಕೆಲಸಗಳು ನಡೆಯಲ್ಲ. ಇದಕ್ಕೂ ಕಾರಣವಿದೆ.

ಆನ್ ಲೈನ್ ಮೂಲಕ ಪಾಸ್ ಪೋರ್ಟ್ ಸೇವಾ ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸುವವರಿಗೆ ಇದೀಗ ಅಡಚಣೆಯುಂದು ಉಂಟಾಗಿದೆ. ಮುಂದಿನ ಐದು ದಿನಗಳ ಕಾಲ ಹೊಸದಾಗಿ ಪಾಸ್ ಪೋರ್ಟ್ ಗೆ ಅರ್ಜಿ ಸಲ್ಲಿಸುವವರು ಅಥವಾ ನವೀಕರಿಸಲು ಬಯಸುವವರಿಗೆ ತಮ್ಮ ಕೆಲಸ ಮಾಡಲು ಸಾಧ್ಯವಾಗದು.

ಇಂದು  ಬೆಳಿಗ್ಗೆ 8 ಗಂಟೆಯಿಂದ ಸೆಪ್ಟೆಂಬರ್ 2 ರ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ನಿರ್ವಹಣಾ ಕಾರ್ಯಗಳ ನಿಮಿತ್ತ ಪಾಸ್ ಪೋರ್ಟ್ ಸೇವಾ ಪೋರ್ಟಲ್ ಬಂದ್ ಆಗಲಿದೆ. ಈ ಸಂದರ್ಭದಲ್ಲಿ ನಿಮಗೆ ಪಾಸ್ ಪೋರ್ಟ್ ಸಂಬಂಧಿತ ಅರ್ಜಿ ಸಲ್ಲಿಸಲು ಸಾಧ್ಯವಾಗದು.

ಈಗಾಗಲೇ ಪಾಸ್ ಪೋರ್ಟ್ ಗೆ ಅರ್ಜಿ ಸಲ್ಲಿಸಿರುವವರ ಕೆಲಸಗಳು ಅಪಾಯಿಂಟ್ ಮೆಂಟ್ ರೀತಿಯಲ್ಲಿ  ದುರಸ್ಥಿ ಬಳಿಕ ಕಾರ್ಯನಿರ್ವಹಣೆಯಾಗಲಿದೆ. ಇದಕ್ಕಾಗಿ ಅರ್ಜಿದಾರರಿಗೆ ಮೊದಲೇ ಮಾಹಿತಿ ನೀಡಲಾಗುತ್ತದೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ ಅಪಾಯಿಂಟ್ ಮೆಂಟ್ ಮರು ನಿಗದಿ ಮಾಡಲಾಗುವುದು ಎಂದು ಕೇಂದ್ರ ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

6 ತಿಂಗಳಿನಿಂದ ಅಪ್ಪ, ಅಮ್ಮನ ಭೇಟಿಯಾಗಿಲ್ಲ, ಶಿಕ್ಷೆ ಕಡಿಮೆಗಾಗಿ ಜಡ್ಜ್‌ ಮುಂದೆ ಪ್ರಜ್ವಲ್ ಕಣ್ಣೀರು

ಪ್ರತಿಭಟನೆ ಮಾಡಲಿರುವ ರಾಹುಲ್ ಗಾಂಧಿ ವಿರುದ್ಧವೇ ಬಿಜೆಪಿ ಪ್ರತಿಭಟನೆ

ಕಾಂಗ್ರೆಸ್ ನವರೇ ಚುನಾವಣೆ ಅಕ್ರಮ ಮಾಡಿದ್ದಾರೆಂದು ನಮಗೆ ಅನುಮಾನವಿದೆ: ಸಿಟಿ ರವಿ

ಜಾರ್ಖಂಡ್‌ನ ಮಾಜಿ ಸಿಎಂ ಶಿಬು ಸೊರೆನ್ ಆರೋಗ್ಯ ಸ್ಥಿತಿ ಗಂಭೀರ, ಏನಾಗಿದೆ ಜೆಎಂಎಂ ನಾಯಕನಿಗೆ

ಪ್ರಜ್ವಲ್ ರೇವಣ್ಣ ಮಾಡಿದ್ದ ಈ ಒಂದು ದರ್ಪದ ವರ್ತನೆಯೇ ಅವರು ಸಿಕ್ಕಿಹಾಕುವಂತೆ ಮಾಡಿತು

ಮುಂದಿನ ಸುದ್ದಿ
Show comments