Select Your Language

Notifications

webdunia
webdunia
webdunia
Sunday, 13 April 2025
webdunia

65ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ನಡೆದ ವಿವಾದಕ್ಕೆ ಕಾರಣವೇನು ಗೊತ್ತಾ…?

ನವದಿಲ್ಲಿ
ನವದಿಲ್ಲಿ , ಶನಿವಾರ, 5 ಮೇ 2018 (06:44 IST)
ನವದಿಲ್ಲಿ : ದೆಹಲಿಯ ವಿಜ್ಞಾನ ಭವನದಲ್ಲಿ ಗುರುವಾರ ಸಂಜೆ ನಡೆದ 65ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಧಾನ ಸಮಾರಂಭವು ವಿವಾದದ ನಡುವೆಯೇ ಮುಕ್ತಾಯವಾಗಿದೆ.


ಯಾಕೆಂದರೆ ಈ ಸಮಾರಂಭದಲ್ಲಿ ಶಿಷ್ಟಾಚಾರದ ಪ್ರಕಾರ ಎಲ್ಲಾ ಪ್ರಶಸ್ತಿ ವಿಜೇತ ಕಲಾವಿದರಿಗೆ ರಾಷ್ಟ್ರಪತಿಗಳೇ ಪ್ರಶಸ್ತಿ ಪ್ರದಾನ ಮಾಡಬೇಕಿತ್ತು. ಆದರೆ, ಸಮಯದ ಅಭಾವ ಕಾರಣದ ಮೇಲೆ 11 ಪ್ರಮುಖ ಪ್ರಶಸ್ತಿಗಳನ್ನು ರಾಷ್ಟ್ರಪತಿಗಳು ವಿತರಿಸಿ, ಉಳಿದ ಪ್ರಶಸ್ತಿಗಳನ್ನು ಕೇಂದ್ರ ಸಚಿವೆ ಸ್ಮೃತಿ ಇರಾನಿ ವಿತರಿಸಲು ಮುಂದಾಗಿದ್ದರು.


ಇದರಿಂದ ಕೋಪಗೊಂಡ ಪ್ರಶಸ್ತಿ ವಿಜೇತರು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಂದ ಪ್ರಶಸ್ತಿಗಳನ್ನು ಸ್ವೀಕರಿಸುವುದಿಲ್ಲ. ನಮಗೆ ರಾಷ್ಟ್ರಪತಿಗಳೇ ಪ್ರಶಸ್ತಿ ಪ್ರದಾನ ಮಾಡಬೇಕು ಎಂದು ಕಾರ್ಯಕ್ರಮ ಬಹಿಷ್ಕರಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಸಿದ್ದರಾಮಯ್ಯ ಬಿಜೆಪಿಯವರ ಮೇಲೆ ಮಾಡಿದ ಆರೋಪವಾದರೂ ಎಂತದ್ದು….?