3 ವರ್ಷದ ಕಂದನ ಮೇಲೆ 'ಡಿಜಿಟಲ್ ರೇಪ್'!

Webdunia
ಭಾನುವಾರ, 12 ಜೂನ್ 2022 (12:37 IST)
ಲಕ್ನೋ : ಉತ್ತರ ಪ್ರದೇಶದಲ್ಲಿ ಕಟ್ಟುನಿಟ್ಟಿನ ಕಾನೂನು ಮತ್ತು ಸುವ್ಯವಸ್ಥೆ ಮತ್ತು ಸಿಎಂ ಯೋಗಿ ಆದಿತ್ಯನಾಥ್ ಅವರ ಕಟ್ಟುನಿಟ್ಟಿನ ಸೂಚನೆಗಳ ಹೊರತಾಗಿಯೂ, ರಾಜ್ಯದಲ್ಲಿ ಅತ್ಯಾಚಾರದಂತಹ ಅಪರಾಧ ಕೃತ್ಯಗಳು ಕಡಿಮೆಯಾಗುತ್ತಿಲ್ಲ.

ಹೆಚ್ಚುತ್ತಿರುವ ಪ್ರಕರಣಗಳ ನಡುವೆ ಡಿಜಿಟಲ್ ಅತ್ಯಾಚಾರಕ್ಕೆ ಸಂಬಂಧಿಸಿದ ದೊಡ್ಡ ಪ್ರಕರಣವೊಂದು ಇದೀಗ ಉತ್ತರಪ್ರದೇಶದ ಗೌತಮ್ ಬುಧ್ ನಗರದಲ್ಲಿ ಬೆಳಕಿಗೆ ಬಂದಿದೆ. ಪ್ಲೇ ಸ್ಕೂಲ್ನಲ್ಲಿ ಓದುತ್ತಿರುವ ಮುಗ್ಧ ಬಾಲಕಿ ಜೊತೆ ಈ ಕುಕೃತ್ಯ ನಡೆದಿದೆ.

ಆದರೆ ಸಂತ್ರಸ್ತೆಯ ತಂದೆ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.ಲಭ್ಯವಾದ ಮಾಹಿತಿಯ ಪ್ರಕಾರ, ಗ್ರೇಟರ್ ನೋಯ್ಡಾದಲ್ಲಿ ವಾಸಿಸುವ ಆದಾಯ ತೆರಿಗೆ ಇಲಾಖೆಯ ಅಧಿಕಾರಿಯ 3 ವರ್ಷದ ಮುಗ್ಧ ಮಗಳು ಹತ್ತಿರದ ಮೌರ್ಯ ಫೌಂಡೇಶನ್ ಪ್ಲೇ ಸ್ಕೂಲ್ನಲ್ಲಿ ಓದುತ್ತಿದ್ದಾಳೆ.

ತಂದೆಯ ಪ್ರಕಾರ, ಶಾಲೆಯಲ್ಲಿ ಚಿಕ್ಕಪ್ಪ ತನಗೆ ಅನ್ಯಾಯ ಮಾಡಿದ್ದಾರೆ ಎಂದು ಸಂತ್ರಸ್ತೆ ಮನೆಯಲ್ಲಿ ಹೇಳಿದ್ದಳು. ಆದರೆ, ಬಾಲಕಿಗೆ ಆರೋಪಿಯನ್ನು ಗುರುತಿಸಲು ಸಾಧ್ಯವಾಗಿಲ್ಲ. ಶಾಲೆಯಲ್ಲಿ ಅಳವಡಿಸಿರುವ ಸಿಸಿಟಿವಿಯಲ್ಲಿ ಡಿಜಿಟಲ್ ಅತ್ಯಾಚಾರದ ಘಟನೆಯೂ ಸೆರೆಯಾಗಿದೆ.

ಪ್ಲೇ ಸ್ಕೂಲ್ನಲ್ಲಿ ನಡೆದ ಘಟನೆ 3 ವರ್ಷದ ಬಾಲಕಿಯ ಕುಟುಂಬವನ್ನು ಬೆಚ್ಚಿ ಬೀಳಿಸಿದೆ. ಇದೇ ವೇಳೆ ಸಂತ್ರಸ್ತೆಯ ತಂದೆಯ ದೂರಿನ ಮೇರೆಗೆ ಬಿಸ್ರಖ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಎರಡು ತಂಡಗಳನ್ನು ರಚಿಸಿದ್ದಾರೆ.

ಈ ಕುರಿತು ತನಿಖೆ ನಡೆಸಲಾಗುತ್ತಿದ್ದು, ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ಮುಂದಿನ ಸುದ್ದಿ
Show comments