ಪಾಕಿಸ್ತಾನ ಕಲಾವಿದರಿಗೆ ಭಾರತದಲ್ಲಿ ಅನಗತ್ಯವಾಗಿ ಕಿರುಕುಳ ನೀಡಲಾಗುತ್ತಿದೆ ಎಂದು ಹೇಳುವ ಮೂಲಕ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಹೊಸ ವಿವಾದವನ್ನು ತಲೆಗೆಳೆದುಕೊಂಡಿದ್ದಾರೆ.
ಪಾಕ್ ಕಲಾವಿದರಿಗೆ ಬೆಂಬಲ ಸೂಚಿಸಿ ಟ್ವೀಟ್ ಮಾಡಿರುವ ಸಿಂಗ್, ಈ ಕಲಾವಿದರು ಶತ್ರು ರಾಷ್ಟ್ರ ಪಾಕಿಸ್ತಾನದಲ್ಲಿ ನಮ್ಮ ಉತ್ತಮ ರಾಯಭಾರಿಗಳಾಗುತ್ತಾರೆ ಎಂದಿದ್ದಾರೆ.
ಉರಿ ದಾಳಿ ಮತ್ತು ಅದಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ಸೀಮಿತ ದಾಳಿ ನಡೆಸಿದ ತರುವಾಯ ಎರಡು ದೇಶಗಳ ಮಧ್ಯೆ ಉಗ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು ಪಾಕ್ ಕಲಾವಿದರ ಬಗ್ಗೆ ಭಾರತದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.
ಪಾಕ್ ಕಲಾವಿದರ ಮೇಲಿನ ನಿರ್ಬಂಧಕ್ಕೆ ಸಂಬಂಧಿಸಿದಂತೆ ಬಾಲಿವುಡ್ ಅಂಗಳದಲ್ಲೂ ಕೂಡ ಪರ- ವಿರೋಧ ಚರ್ಚೆಗಳು ನಡೆಯುತ್ತಿವೆ.
ಮತ್ತೀಗ ದಿಗ್ವಿಜಯ್ ಹೇಳಿಕೆ ಸಾಕಷ್ಟು ಚರ್ಚೆಯನ್ನು ಹುಟ್ಟು ಹಾಕುವುದರಲ್ಲಿ ಸಂಶಯವಿಲ್ಲ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ