Select Your Language

Notifications

webdunia
webdunia
webdunia
webdunia

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಶಾಸಕರಿಗೆ ಬಿಜೆಪಿ ನೂರು ಕೋಟಿ ಆಮಿಷ- ಹೊಸ ಬಾಂಬ್ ಸಿಡಿಸಿದ ದಿಗ್ವಿಜಯ್ ಸಿಂಗ್

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಶಾಸಕರಿಗೆ ಬಿಜೆಪಿ ನೂರು ಕೋಟಿ ಆಮಿಷ- ಹೊಸ ಬಾಂಬ್ ಸಿಡಿಸಿದ ದಿಗ್ವಿಜಯ್ ಸಿಂಗ್
ಭೋಪಾಲ್ , ಬುಧವಾರ, 9 ಜನವರಿ 2019 (12:02 IST)
ಭೋಪಾಲ್ : ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಬಿಜೆಪಿ ಕೈ ಶಾಸಕರೊಬ್ಬರಿಗೆ ಚ ರೂ. ಆಮಿಷ ಒಡ್ಡಿತ್ತು ಎಂದು ಕಾಂಗ್ರೆಸ್ ನ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಹೊಸ ಬಾಂಬ್ ಸಿಡಿಸಿದ್ದಾರೆ.


ಈ ಕುರಿತು ಮಾತನಾಡಿರುವ ದಿಗ್ವಿಜಯ್ ಸಿಂಗ್, ಬಿಜೆಪಿ ಶಾಸಕ ನಾರಾಯಣ ತ್ರಿಪಾಠಿ ಸಬಲ್ ಗಢದ ಕಾಂಗ್ರೆಸ್ ಶಾಸಕ ಬಯಜ್ ನಾಥ್ ಕುಶ್ವಾಹರನ್ನು ಡಾಬಾಕ್ಕೆ ಕರೆದೊಯ್ದು, ಅಲ್ಲಿ ಬಿಜೆಪಿಯ ಮಾಜಿ ಸಚಿವರಾದ ನರೋತ್ತಮ್ ಮಿಶ್ರಾ ಹಾಗೂ ವಿಶ್ವಾಸ್ ಸಾರಾಂಗ್ ಅವರು ಕೈ ಶಾಸಕನಿಗೆ ನೂರು ಕೋಟಿ ರೂ. ಆಮಿಷ ಒಡ್ಡಿದ್ದರು. ಅಷ್ಟೇ ಅಲ್ಲದೇ  ಬಿಜೆಪಿ ಸರ್ಕಾರದಲ್ಲಿ ಸಚಿವ ಸ್ಥಾನ ನೀಡುವುದಾಗಿ  ಭರವಸೆಯನ್ನೂ ನೀಡಿದ್ದರು ಎಂದು ದಿಗ್ವಿಜಯ್ ಸಿಂಗ್ ಆರೋಪ ಮಾಡಿದ್ದಾರೆ.


ಇದಕ್ಕೆ ಪ್ರತಿಕ್ರಿಯಿಸಿದ ಬಿಜೆಪಿ ಮಾಜಿ ಸಚಿವ ವಿಶ್ವಾಸ್ ಸಾರಾಂಗ್  ಈ ಆರೋಪವನ್ನು ತಳ್ಳಿಹಾಕಿದ್ದು, ಸಾಧ್ಯವಿದ್ದರೆ ಕಾಂಗ್ರೆಸ್ ಪೂರಕ ಆಧಾರ ನೀಡಿ ಆರೋಪ ಸಾಬೀತುಪಡಿಸಲಿ ಎಂದು ಸವಾಲೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಭಾರತ ಬಂದ್ ಹಿನ್ನಲೆ; ಮುಚ್ಚಿದ ಅಂಗಡಿಗಳಲ್ಲಿ ಕಳ್ಳರ ಕೈಚಳಕ