Select Your Language

Notifications

webdunia
webdunia
webdunia
webdunia

ತುರ್ತು ಶಸ್ತ್ರಚಿಕಿತ್ಸೆಗೊಳಗಾಗಿದ್ದ ಸದ್ಗುರು ಆಸ್ಪತ್ರೆಯಿಂದ ಡಿಸ್ಚಾರ್ಜ್

Spiritual guru and founder of the Isha Foundation

Sampriya

ನವದೆಹಲಿ , ಬುಧವಾರ, 27 ಮಾರ್ಚ್ 2024 (17:20 IST)
Photo Courtesy X
ನವದೆಹಲಿ: ತುರ್ತು ಮೆದುಳಿನ ಶಸ್ತ್ರಚಿಕಿತ್ಸೆಗೊಳಗಾದ ಆಧ್ಯಾತ್ಮಿಕ ಗುರು ಮತ್ತು ಇಶಾ ಫೌಂಡೇಶನ್‌ನ ಸಂಸ್ಥಾಪಕ, ಸದ್ಗುರು ಜಗ್ಗಿ ವಾಸುದೇವ್ ಅವರು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಮಾರ್ಚ್ 17 ರಂದು ಆಧ್ಯಾತ್ಮಿಕ ಗುರು ಸದ್ಗುರು ಅವರನ್ನು ಮೆದುಳಿನ ತುರ್ತು ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಯಿತು. ಪ್ರಧಾನಿ ಮೋದಿ ಸೇರಿದಂತೆ ಅನೇಕ ಮಂದಿ ಸದ್ಗುರು ಶೀಘ್ರ ಗುಣಮುಖರಾಗಿ ಎಂದು ಹಾರೈಸಿದ್ದರು.

ನಾಲ್ಕು ವಾರಗಳಿಂದ ತಲೆನೋವಿನಿಂದ ಬಳಲುತ್ತಿದ್ದ ಸದ್ಗುರು ಅವರು ಮಾರ್ಚ್‌ 8ರಂದು ಮಹಾಶಿವರಾತ್ರಿಯನ್ನು ಅದ್ದೂರಿಯಾಗಿ ನಡೆಸಿಕೊಟ್ಟಿದ್ದರು. ತಲೆನೋವಿನ ಬಗ್ಗೆ ಹಿರಿಯ ನರರೋಗ ತಜ್ಞ ಡಾ.ವಿನಿತ್ ಸೂರಿ ಅವರಿಗೆ ಕರೆ ಮಾಡಿ ಸದ್ಗುರು ತಿಳಿಸಿದ್ದಾರೆ. ಅವರ ಸಲಹೆಯಂತೆ ಎಂಆರ್‌ಐ ಮಾಡಿಸಿಕೊಂಡಿದ್ದು, ಈ ವೇಳೆ ರಕ್ತಸ್ರಾವ ಆಗಿರುವುದು ಕಂಡುಬಂದಿದೆ.

ಸದ್ಗುರು ಅವರಿಗೆ ಕೂಡಲೇ ಆಸ್ಪತ್ರೆಗೆ ದಾಖಲಾಗಲು ಸೂಚಿಸಲಾಗಿತ್ತು. ಆದರೆ, ಮಾರ್ಚ್ 15 ಮತ್ತು 16ರಂದು ಪ್ರಮುಖ ಸಭೆಗಳು ಇದ್ದ ಕಾರಣ, ನೋವು ನಿವಾರಕ ಮಾತ್ರೆ ಪಡೆದು ಎರಡು ದಿನಗಳ ನಂತರ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಆಸ್ಪತ್ರೆ ತಿಳಿಸಿದೆ.

ಡಾ.ವಿನಿತ್ ಸೂರಿ, ಡಾ.ಪ್ರಣವ್ ಕುಮಾರ್, ಡಾ.ಸುಧೀರ್ ತ್ಯಾಗಿ ಮತ್ತು ಡಾ.ಎಸ್.ಚಟರ್ಜಿ ಅವರನ್ನೊಳಗೊಂಡ ವೈದ್ಯರ ತಂಡವು ಸದ್ಗುರು ಅವರಿಗೆ ಮೆದುಳಿನ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಿದ್ದರು.


Share this Story:

Follow Webdunia kannada

ಮುಂದಿನ ಸುದ್ದಿ

ಅಕ್ರಮ ಹಣ ವರ್ಗಾವಣೆ ಆರೋಪ: ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪುತ್ರಿ ವಿರುದ್ಧ ದೂರು