Publish Date: Thu, 23 Mar 2023 (12:34 IST)
Updated Date: Thu, 23 Mar 2023 (13:36 IST)
ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಿತ ಹೇಳಿಕೆ ನೀಡಿರುವ ಹಿನ್ನೆಲೆ ಕೋರ್ಟ್ ಅವರನ್ನು ದೋಷಿ ಎಂದು ತೀರ್ಪು ನೀಡಿದೆ. ಇದರ ಬೆನ್ನಲ್ಲೇ ಟ್ವೀಟ್ ಮಾಡಿರುವ ರಾಗಾ ಸತ್ಯವೇ ನನ್ನ ದೇವರು ಎನ್ನುತ್ತ ಮಹಾತ್ಮ ಗಾಂಧೀಜಿಯವರ ಸಾಲುಗಳನ್ನು ನೆನಪಿಸಿಕೊಂಡಿದ್ದಾರೆ.
ನನ್ನ ಧರ್ಮ ಸತ್ಯ ಮತ್ತು ಅಹಿಂಸೆಯನ್ನು ಆಧರಿಸಿದೆ. ಸತ್ಯವೇ ನನ್ನ ದೇವರು. ಅದನ್ನು ಪಡೆಯುವ ಸಾಧನ ಅಹಿಂಸೆ ಎಂಬ ಬಾಪೂಜಿಯವರ ಸಾಲನ್ನು ರಾಹುಲ್ ಟ್ವೀಟ್ನಲ್ಲಿ ಹಂಚಿಕೊಂಡಿದ್ದಾರೆ.
2019ರ ಲೋಕಸಭಾ ಚುನಾವಣೆಯ ವೇಳೆ ನರೇಂದ್ರ ಮೋದಿಯವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿಗೆ ಸೂರತ್ ಕೋರ್ಟ್ ಗುರುವಾರ ಬೆಳಗ್ಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಶಿಕ್ಷೆ ವಿಧಿಸಿದ ಬೆನ್ನಲ್ಲೇ ರಾಹುಲ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದು ಸೂರತ್ ಕೋರ್ಟ್ 30 ದಿನಗಳ ಜಾಮೀನು ಮಂಜೂರು ಮಾಡಿದೆ.
Ramya kosira
Publish Date: Thu, 23 Mar 2023 (12:34 IST)
Updated Date: Thu, 23 Mar 2023 (13:36 IST)