ನವದೆಹಲಿ: ರಾಜ್ಯ ರಾಜಕಾರಣದಲ್ಲಿ ನವೆಂಬರ್‌ನಲ್ಲಿ ಕ್ರಾಂತಿ ನಡೆಯಲಿದೆ ಎಂಬ ಚರ್ಚೆ ಸಂಬಂಧ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಯಾವುದೇ ಕ್ರಾಂತಿಯಿಲ್ಲ. ಬದಲಾಗಿ 2028ಕ್ಕೆ ಕಾಂಗ್ರೆಸ್ ಅಧಿಕಾರಕ್ಕೆ ವಾಪಸ್ ಬರುವ ಮೂಲಕ ಕ್ರಾಂತಿಯಾಗಲಿದೆ ಎಂದು ಹೇಳಿದರು.
ಈ ಹೇಳಿಕೆಯಿಂದ ಇದೀಗ ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಬೆಳವಣಿಗೆ ಭಾರೀ ಕುತೂಹಲವನ್ನು ಮೂಡಿಸಿದೆ.
ನವದೆಹಲಿಯಲ್ಲಿ ಈ ಸಂಬಂಧ ಪ್ರತಿಕ್ರಿಯಿಸಿದ, ರಾಜ್ಯದಲ್ಲಿ ಯಾವುದೇ ನವೆಂಬರ್ ಕ್ರಾಂತಿ ಇಲ್ಲ. ಬದಲಾಗಿ 2028ಕ್ಕೆ ಕಾಂಗ್ರೆಸ್ ಅಧಿಕಾರಕ್ಕೆ ವಾಪಸ್ ಬರುವ ಮೂಲಕ ಕ್ರಾಂತಿ ಆಗಲಿದೆ ಎಂಧರು.
ನಾಯಕತ್ವ ಬದಲಾವಣೆ ಆಗುತ್ತೆ ಅಂತಾ ಸಿಎಂ ಸಿದ್ದರಾಮಯ್ಯ ಅಥವಾ ನಾನು ಹೇಳಿದ್ದೀವಾ ಎಂದು ಮರು ಪ್ರಶ್ನೆ ಮಾಡಿದರು.
ನಾಯಕತ್ವ ಬಗ್ಗೆ ಹೈಕಮಾಂಡ್ ಏನ್ ತೀರ್ಮಾಣ ಕೈಗೊಳ್ಳುತ್ತಾ ಅದರಂತೆ ನಾವು ನಡೆದುಕೊಳ್ಳುತ್ತೇವೆ.
ಇನ್ನೂ ದೆಹಲಿ ಭೇಟಿ ಹಿಂದಿನ ಉದ್ದೇಶದ ಬಗ್ಗೆ ಪ್ರಶ್ನಿಸಿದಾಗ, ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನ ಭೇಟಿಯಾಗಿಲ್ಲ. ಪಕ್ಷ ಸಂಘಟನೆ ವಿಚಾರವಾಗಿ ಹೈಕಮಾಂಡ್ ನಾಯಕರನ್ನು ಭೇಟಿ ಆಗುತ್ತೇನೆ. ಸಚಿವ ಸಂಪುಟ ಬಗ್ಗೆ ಚರ್ಚೆ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.