Publish Date: Tue, 15 Oct 2019 (10:40 IST)
Updated Date: Tue, 15 Oct 2019 (10:44 IST)
ನವದೆಹಲಿ : ತಿಹಾರ್ ಜೈಲಿನಲ್ಲಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ಇಂದು ದೆಹಲಿಯ ಹೈಕೋರ್ಟ್ ನಲ್ಲಿ ನಡೆಯಲಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಹಾರ ಜೈಲು ಸೇರಿದ ಡಿಕೆಶಿ ಅವರ ಜಾಮೀನು ಅರ್ಜಿ ವಿಚಾರಣೆ ನ್ಯಾ.ಸುರೇಶ ಕುಮಾರ್ ಕೈಟಾ ನೇತೃತ್ವದಲ್ಲಿ ನಿನ್ನೆ ನಡೆಯಬೇಕಿತ್ತು. ಆದರೆ ಡಿಕೆಶಿ ಪರ ವಕೀಲರು ಗೈರಾದ ಹಿನ್ನಲೆಯಲ್ಲಿ ವಿಚಾರಣೆಯನ್ನು ಮುಂದೂಡಿದ್ದು, ಇಂದು ಮಧ್ಯಾಹ್ನ 3.30ಕ್ಕೆ ವಿಚಾರಣೆ ನಡೆಯಲಿದೆ ಎನ್ನಲಾಗಿದೆ.
ಹಾಗೇ ಡಿಕೆಶಿ ಅವರ ತಾಯಿ ಗೌರಮ್ಮನ ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್ ಜಾರಿ ಮಾಡಿದ ಹಿನ್ನಲೆಯಲ್ಲಿ ಇಂದು ಡಿಕೆಶಿ ತಾಯಿ ವಿಚಾರಣೆಗೆ ಹಾಜರಾಗಲಿದ್ದಾರೆ ಎನ್ನಲಾಗಿದೆ.