Select Your Language

Notifications

webdunia
webdunia
webdunia
webdunia

ಸಂಸತ್ತಿನಲ್ಲಿ ಡಿಕೆ ಸುರೇಶ್ ಗೆ ಮಾತನಾಡಲು ಅವಕಾಶ ಕೊಟ್ಟಿಲ್ಲ- ಡಿಕೆಶಿ

ಶಿವಕುಮಾರ್

geetha

bangalore , ಗುರುವಾರ, 8 ಫೆಬ್ರವರಿ 2024 (20:02 IST)
ದೆಹಲಿ-ದೆಹಲಿಯಲ್ಲಿ ಮಾಧ್ಯಮಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದ ಅವರು "ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರ ಮಾತಿನ ನಂತರ ಕಲಾಪ ಅಂತ್ಯಗೊಳಿಸಿ ರಾಜ್ಯದ ಪರ ಸುರೇಶ್ ಅವರ ಧ್ವನಿ ಎತ್ತಲು ಅವಕಾಶ ಕೊಡದೆ ಅನ್ಯಾಯ ಮಾಡಲಾಗಿದೆ. ಬಿಜೆಪಿ ಸಂಸದ ತೇಜಸ್ವಿ ಸೂರ್ಯ ರಾಜ್ಯದ ಪರವಾಗಿ ಮಾತನಾಡದೆ ಪಕ್ಷಪಾತಿಯಾಗಿ ಮಾತನಾಡುತ್ತಿದ್ದರು. ನಮ್ಮ ಪಕ್ಷದ ಎಲ್ಲಾ ಮಂತ್ರಿಗಳು, ಶಾಸಕರು, ಸಂಸದರು ದೆಹಲಿಗೆ ಬಂದು ರಾಜ್ಯದ ಪರ ದನಿ ಎತ್ತಿದರು. ಈ ಬಗ್ಗೆ ಬಿಜೆಪಿ ಎಂಪಿಗಳಿಗೆ ನಾಚಿಕೆಯಾಗಬೇಕು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ನಾವು ರಾಜ್ಯದ ಕೂಲಿ ಕಾರ್ಮಿಕರ ಪರವಾಗಿ ಹೋರಾಡುತ್ತೇವೆ. ಉದ್ಯೋಗ ಖಾತ್ರಿ ಯೋಜನೆ ಹಾಗೂ ರಾಜ್ಯದ ಅಭಿವೃದ್ದಿಗೆ ಬೇಕಾದ ಅನುದಾನಕ್ಕಾಗಿ ಹೋರಾಡುತ್ತೇವೆ. ಕರ್ನಾಟಕ ಸರ್ಕಾರ ನೀಡಿರುವ ಅಂಕಿ-ಅಂಶಗಳು ಸುಳ್ಳು ಎಂದು ಬಿಜೆಪಿ ಹೇಳುತ್ತಿದೆ ಎಂದು ಕೇಳಿದಾಗ "ಬಿಜೆಪಿಯವರು ಸುಳ್ಳು ಎನ್ನುತ್ತಿದ್ದಾರೆ. ನಾವು ಸತ್ಯ ಎನ್ನುತ್ತಿದ್ದೇವೆ. ಬಿಜೆಪಿಯವರು ಅಧಿವೇಶನದಲ್ಲಿ ಶ್ವೇತಪತ್ರ ಹೊರಡಿಸಬೇಕು ಎಂದು ಹೇಳುತ್ತಿದ್ದಾರೆ. ನಾವು ಶ್ವೇತ ಪತ್ರವನ್ನೇ ಅವರ ಮುಂದೆ ಇಡುತ್ತೇವೆ. ನಾವು ಯಾವುದೇ ಸುಳ್ಳು ಹೇಳುತ್ತಿಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮನೆ ಖಾಲಿ ಮಾಡಿದ್ರು ಗೃಹಜ್ಯೋತಿ ಬಳಸಬಹುದು ಹೇಗೆ ಗೊತ್ತಾ..?